Friday, January 24, 2025
ಸುದ್ದಿ

ವಿಟ್ಲದ ಸರಕಾರಿ ಪ್ರೌಢಶಾಲೆಗೆ ನುಗ್ಗಿದ ಕೆಲ ಕಿಡಿಗೇಡಿಗಳು ; ಸ್ವತ್ತುಗಳಿಗೆ ಹಾನಿ – ಕಹಳೆ ನ್ಯೂಸ್

ಗೋಡೆಯ ಮೇಲೆ ಅಶ್ಲೀಲ ಬರಹಗಳನ್ನು ಬರೆದಿರುವ ಘಟನೆ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಸರಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಈ ಸಂಬoಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬೆಳಗ್ಗೆ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ.


ಕಿಡಿಗೇಡಿಗಳು ಶಾಲೆಯ ಎಲ್ಲ ತರಗತಿ ಕೊಠಡಿಯ ಬಾಗಿಲ ಬಳಿ ಮೊಟ್ಟೆ ಒಡೆದಿದ್ದಾರೆ. ಅಲ್ಲದೇ ಒಂದು ಕೊಠಡಿಯ ಕಿಟಕಿಯ ಗಾಜನ್ನು ಒಡೆದಿರುವುದಲ್ಲದೇ, ಮಕ್ಕಳ ಸೃಜನಾತ್ಮಕತೆಗೆ ಒದಗಿಸಿದ ಸೂಚನಾ ಫಲಕದ ಗಾಜು, ಜೊತೆಗೆ ಶಾಲೆಯ ಟ್ಯೂಬ್ ಲೈಟ್‌ಗಳನ್ನು ಒಡೆದು ಹಾಕಿದ್ದಾರೆ. ಪ್ರಾಥಮಿಕ ಶಾಲೆಯ ಗೇಟ್ ಮತ್ತು ಅಡುಗೆ ಕೋಣೆಯ ಬಾಗಿಲಿಗೆ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ. ವಿದ್ಯಾರ್ಥಿಗಳು ಬಿಡಿಸಿದ್ದ ಸ್ವಾತಂತ್ರ‍್ಯ ಹೋರಾಟಗಾರರ ಚಿತ್ರಗಳನ್ನು ಹರಿದು ಹಾಕಿದ್ದಾರೆ. ಅಲ್ಲದೆ ಶಾಲೆ ಗೋಡೆ ಮೇಲೆ ಅಶ್ಲೀಲ ಬರಹಗಳನ್ನು ಬರೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದರಿಂದಾಗಿ ಶಾಲೆಯ ದೈನಂದಿನ ತರಗತಿಗೆ ತೊಂದರೆ ಉಂಟಾಗಿದ್ದು, ಈ ಕುರಿತು ಕ್ರಮ ಕೈಗೊಳ್ಳುವಂತೆ ವಿಟ್ಲ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಶಾಲಾ ಮೈದಾನವನ್ನು ಅಕ್ರಮವಾಗಿ ಪ್ರವೇಶಿಸಿರುವ ತಂಡ ಕ್ರಿಕೆಟ್ ಆಡಿ ಬಳಿಕ ಈ ಕೃತ್ಯ ಎಸಗಿರಬಹುದು ಎಂದು ಸಂಶಯಿಸಲಾಗಿದೆ. ಈ ಸಂಬAಧ ವಿಟ್ಲ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು