Recent Posts

Monday, January 27, 2025
ಸುದ್ದಿ

ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ – ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ – ಕಹಳೆ ನ್ಯೂಸ್

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಉಡುಪಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕಚೇರಿ, ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬ್ರಹ್ಮಾವರ ವಲಯ ಮತ್ತು ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ ಇವರ ಸಹಯೋಗದೊಂದಿಗೆ ಇಂದು ಬ್ರಹ್ಮಾವರ ಶ್ಯಾಮಿಲಿ ಶನಾಯ ಸಭಾಭವನದಲ್ಲಿ ನಡೆದ “ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ 2023 ಕಾರ್ಯಕ್ರಮ”ದಲ್ಲಿ ಜಿಲ್ಲಾ ಪ್ರಶಸ್ತಿ ವಿಜೇತರನ್ನು ಸನ್ಮಾನಿಸಿ ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು


ಈ ಸಂದರ್ಭದಲ್ಲಿ ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರು ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರೇಮಾ ಶೆಟ್ಟಿ, ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್, ಮಣಿಪಾಲ ಮಾಹೆ ಕುಲಾಧಿಪತಿಗಳಾದ ಎಚ್. ಎಸ್ ಬಲ್ಲಾಲ್, ಹಾಗೂ ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಶಾಲಾ ಶಿಕ್ಷಣ ಇಲಾಖೆಯ ಆಡಳಿತ ಉಪನಿರ್ದೇಶಕರಾದ ಗಣಪತಿ, ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಶೋಕ್ ಕಾಮತ್, ಬ್ರಹ್ಮಾವರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಂಗನಾಥ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು