ಉಡುಪಿ : ರಾಷ್ಟ್ರಮಟ್ಟದ ಯುವ ಬಾಕ್ಸಿಂಗ್ ಪಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮಲ್ಪೆ ಸಮೀಪದ ಶಾಂತಿನಗರದಲ್ಲಿ ಘಟನೆ ನಡೆದಿದೆ.
ಶಾಂತಿನಗರ ನಿವಾಸಿ ವಿರಾಜ್ ಮೆಂಡನ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.
ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಇವರು, ವೈಯಕ್ತಿಕ ಕಾರಣಕ್ಕೆ ಮನನೊಂದು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.