Recent Posts

Sunday, January 19, 2025
ಸುದ್ದಿ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನಲೆ, ಮತ್ತೆ ಮಳೆ ಸಾಧ್ಯತೆ – ಕಹಳೆ ನ್ಯೂಸ್

Dark rain clouds hover over Mumbai ahead of monsoon. Express Photo By Pradip Das, 04th June 2018, Mumbai.

ಬೆಂಗಳೂರು: ವಾಯುಭಾರ ಕುಸಿತದ ಪ್ರಭಾವ ಸಮುದ್ರದ ಮೇಲೆ ಹೆಚ್ಚಾಗಿರುವುದರಿಂದ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗಿದ್ದರೂ ಬದಲಾದ ವಾಯುಗುಣದಿಂದ ಮಾರುತಗಳ ದಿಕ್ಕು ಬದಲಾಗಿದೆ. ಹಾಗಾಗಿ, ಮಳೆಯ ನಿರೀಕ್ಷೆ ಕಡಿಮೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೂ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿಯ ಕೆಲ ಭಾಗದಲ್ಲಿ 2-3 ದಿನ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬಿಸಿಲಿನ ಪ್ರಮಾಣ ಹೆಚ್ಚಾಗಿರುವುದರಿಂದ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.