ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ವಳಕಾಡು ಸರಕಾರಿ ಪೌಢಶಾಲೆ ಶಾಲೆಯಲ್ಲಿ ಇಂದು ಶ್ರೀ ಕೃಷ್ಣ ಜಯಂತಿ ಮಹೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಕಾಪು ವಿಧಾನಸಭಾ ಕ್ಷೇತ್ರ ದ ಶಾಸಕರು ಗುರ್ಮೆ ಸುರೇಶ್ ಶೆಟ್ಟಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಂದ್ರ ಅಡಿಗ, ಉಡುಪಿ ಜಿಲ್ಲಾ ಯಾದವ ಗೊಲ್ಲ ಸಮಾಜ ಸಂಘ (ರಿ.) ವಾರಂಬಳ್ಳಿ ಅಧ್ಯಕ್ಷರಾದ ದಯಾನಂದ್ ಬಿ ಆರ್, ಸ್ಥಳೀಯ ನಗರಸಭಾ ಸದಸ್ಯರಾದ ರಜನಿ ಹೆಬ್ಬಾರ್, ವಳಕಾಡು ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ನಿರ್ಮಲಾ, ಸಾಹಿತಿಗಳಾದ ಕಾತ್ಯಾಯಿನಿ ಕುಂಜಿಬೆಟ್ಟು ಹಾಗೂ ಅಪರ ಜಿಲ್ಲಾಧಿಕಾರಿಗಳಾದ ಮಮತಾ ದೇವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪೂರ್ಣಿಮಾ ಉಪಸ್ಥಿತರಿದ್ದರು.