Friday, January 24, 2025
ಸುದ್ದಿ

ಪುತ್ತೂರಿನಿಂದ ಕಾಣಿಯೂರು ಕಡೆಗೆ ಬರುವ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕ ಅರೆಸ್ಟ್ – ಕಹಳೆ ನ್ಯುಸ್

ಪುತ್ತೂರು : ಪುತ್ತೂರು – ಕಾಣಿಯೂರು ಕಡೆಗೆ ಬರುವ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ ಘಟನೆ ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಹಿಳೆ ಪುತ್ತೂರಿನಿಂದ ನಿಂತಿಕಲ್ಲಿಗೆ ಬಸ್ಸಿನಲ್ಲಿ ಸಂಜೆ ಬರುತ್ತಿರುವಾಗ ಯುವಕನೋರ್ವ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ್ದಲ್ಲದೇ, ಯುವತಿಗೆ ಟಿಕೇಟ್ ನಲ್ಲಿ ತನ್ನ ಪೋನ್ ನಂಬರ್ ಬರೆದು ಕೊಟ್ಟು ಬಳಿಕ ಸವಣೂರಿನಲ್ಲಿ ಬಸ್ಸ್ ಇಳಿದು ಹೋಗಿದ್ದಾನೆ.
ಈ ಬಗ್ಗೆ ಯುವತಿ ಟ್ವೀಟ್ ಮೂಲಕ ದೂರು ನೀಡಿದ್ದು, ಈ ವಿಷಯದ ಕುರಿತು ಮಹಿಳೆಯಿಂದ ದೂರನ್ನು ಸ್ವೀಕರಿಸಿದ ಬೆಳ್ಳಾರೆ ಪೆÇಲೀಸರು ಆರೋಪಿಯನ್ನು ವಶಕ್ಕೆ ಪಡೆದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.