ಉಡುಪಿ : ಕಾಪು ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ ಇಂದು ಕಾಪು ಪುರಸಭೆಯ ಸಭಾಂಗಣದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ಯೋಜನೆಯ ಇ-ಕೆವೈಸಿ ಜೋಡಣೆಯಲ್ಲಿ ಉಂಟಾಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣದಲ್ಲಿ ಪರಿಹರಿಸುವಂತೆ ಮತ್ತು ಪಶು ಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿ ಗೊಳಿಸುವ ಬಗ್ಗೆ ಚರ್ಚಿಸಿ ಮಳೆಗಾಲದಲ್ಲಿ ಲೋಕೋಪಯೋಗಿ ಇಲಾಖೆ (P.W.D) ರಸ್ತೆಗಳು ತೀರಾ ಹದಗೆಟ್ಟಿದ್ದು ಇದರ ತುರ್ತು ನಿರ್ವಹಣೆಗೆ ಕ್ರಮ ಕೈಗೊಳ್ಳಬೇಕು ಹಾಗೂ ವಾಡಿಕೆಯ ಮಳೆಯಾಗದ ಕಾರಣ ಕೃಷಿ ಬೆಳೆಗಳಿಗೆ ನೀರಿನ ಸಮಸ್ಯೆ ಉಂಟಾಗುತ್ತಿರುವುದರಿAದ ಕಿಂಡಿ ಅಣೆಕಟ್ಟುಗಳಲ್ಲಿ ನೀರಿನ ಸಂಗ್ರಹಣೆಯನ್ನು ಹೆಚ್ಚಿಸುವಂತೆ, ರಸ್ತೆಯ ಬದಿಗಳಲ್ಲಿರುವ ಅಪಾಯಕಾರಿ ಮರಗಳನ್ನು ಶೀಘ್ರದಲ್ಲಿ ತೆರವುಗೊಳಿಸುವ ಬಗ್ಗೆ ಸಂಬAಧಪಟ್ಟ ಇಲಾಖಾಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಈ ಸಂದರ್ಭದಲ್ಲಿ ಕಾಪು ತಾಲೂಕು ಪಂಚಾಯತ್ ಆಡಳಿತಾಧಿಕಾರಿಗಳಾದ ಸೀತಾ, ಕಾಪು ತಾಲೂಕು ಕಾರ್ಯ ನಿರ್ವಹಣಾಧಿಕಾರಿಗಳಾದ ವಿಜಯ, ಕಾಪು ತಹಶೀಲ್ದಾರರಾದ ನಾಗರಾಜ್ ನಾಯ್ಕಡ, ಕಾಪು ಪುರಸಭೆಯ ಮುಖ್ಯಾಧಿಕಾರಿಗಳಾದ ಸಂತೋಷ್, ಕಾಪು ತಾಲೂಕು ಪಂಚಾಯತ್ ಲೆಕ್ಕ ಅಧೀಕ್ಷಕರಾದ ಸುಂದರ್ ನಾಯಕ್ ಉಪಸ್ಥಿತರಿದ್ದರು.