ರಾಜ್ಯ, ದೇಶ ಮಾತ್ರವಲ್ಲದೇ, ವಿಶ್ವದ ಪ್ರಮುಖ ದೇಶಗಳಲ್ಲಿಯೂ ಅಕ್ಕಿಯ ದರ ಭಾರಿ ಏರಿಕೆ ಕಂಡಿದೆ. ಆಗಸ್ಟ್ ತಿಂಗಳಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಅಕ್ಕಿಯ ದರ ಶೇಕಡ 9.8ರಷ್ಟು ಏರಿಕೆ ಕಂಡಿದೆ ಎಂದು ಆಹಾರ ಮತ್ತು ಕೃಷಿ ಸಂಸ್ಥೆ -ಈಂಔ ಸರಾಸರಿ ಆಹಾರದರ ಸೂಚ್ಯಂಕ ತಿಳಿಸಿದೆ.
ಈ ದರ ಕಳೆದ 15 ವರ್ಷಗಳಲ್ಲೇ ಗರಿಷ್ಠವಾಗಿದೆ. ಕೊರೋನಾ ನಂತರ ಜಾಗತಿಕವಾಗಿ ಅಕ್ಕಿ ಬಳಕೆಯಲ್ಲಿ ಗಣನೀಯ ಪ್ರಮಾಣದಲ್ಲಿ ಹೆಚ್ಚಳ ಆಗಿದೆ. ಅಕ್ಕಿಗೆ ಬೇಡಿಕೆ ಹೆಚ್ಚಿದ್ದು, ಭಾರತದಿಂದ ಅಕ್ಕಿ ರಫ್ತು ಮೇಲೆ ನಿರ್ಬಂಧ ಹೇರಲಾಗಿದೆ. ಹವಾಮಾನ ವೈಪರಿತ್ಯದಿಂದಾಗಿ ಪೂರೈಕೆಯಲ್ಲಿ ವ್ಯತ್ಯವಾಗಿರುವುದರಿಂದ ಬೆಲೆ ಏರಿಕೆಯಾಗಿದೆ ಎಂದು ಹೇಳಲಾಗಿದೆ.
ದೇಶದಲ್ಲಿಯೇ ಮಳೆ ಕೊರತೆ ಕಂಡುಬAದಿದ್ದು, ಸದ್ಯದ ಪರಿಸ್ಥಿತಿ ಗಮನಿಸಿದಾಗ ಈ ಬಾರಿ ರಾಜ್ಯದಲ್ಲಿ ಶೇಕಡ 50ರಷ್ಟು ಭತ್ತ ಬೆಳೆ ಕಡಿಮೆಯಾಗಬಹುದು. ಹೆಚ್ಚಿನ ಮಳೆಯಲಿ ಶೇಕಡ 25 ರಿಂದ 30 ರಷ್ಟು ಹೆಚ್ಚುವರಿ ಬೆಳೆಯಾಗಬಹುದು. ಇಲ್ಲದಿದ್ದರೆ ಮುಂದಿನ ವರ್ಷ ಅಕ್ಕಿ ಕೊರತೆ ಎದುರಾಗಲಿದ್ದು, ಬೇಸಿಗೆ ಬೆಳೆ ಬಂದ ನಂತರ ಸ್ವಲ್ಪಮಟ್ಟಿಗೆ ಕೊರತೆ ಸರಿದೂಗಿಸಬಹುದಾಗಿದೆ.
ಎರಡು ತಿಂಗಳ ಹಿಂದೆ ಇದ್ದ ಅಕ್ಕಿದರ ಈಗ 10 ರಿಂದ 20 ರೂ.ವರೆಗೆ ದುಬಾರಿಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಈ ದರಕ್ಕೆ ಶೇಕಡ 10ರಷ್ಟು ಸೇರಿಸಿ ಮಾರಾಟ ಮಾಡಲಾಗುತ್ತದೆ.