ಬೆಂಗಳೂರು: ವಿವಾಹವಾಗಿ ಮೂರು ತಿಂಗಳ ಅಂತರದಲ್ಲೇ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಡುಗೋಡಿ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಕೃಷ್ಣವೇಣಿ ಆತ್ಮಹತ್ಯೆಗೆ ಶರಣಾಗಿರುವ ಗೃಹಿಣಿ. ಬೆಳಗ್ಗೆ ವಿಚಾರ ಗೊತ್ತಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಧಾವಿಸಿದ ಕಾಡುಗೋಡಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತ ಯುವತಿಯನ್ನು 26 ವರ್ಷದ ಕೃಷ್ಣವೇಣಿ ಎಂದು ಗುರುತಿಸಲಾಗಿದ್ದು, ಮೂರು ತಿಂಗಳ ಹಿಂದಷ್ಟೇ ಕೃಷ್ಣವೇಣಿಯನ್ನು ವಿವಾಹ ಮಾಡಿಕೊಡಲಾಗಿತ್ತು ಎನ್ನಲಾಗಿದೆ.
ಕೋಲಾರ ಮೂಲದ ಪೃಥ್ವಿರಾಜ್ ಜೂತೆಗೆ ಕೃಷ್ಣವೇಣಿೆ ವಿವಾಹವಾಗಿದ್ದು ಪತಿ ಪೃಥ್ವಿರಾಜ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.
ತಮ್ಮ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಅಳಿಯನ ವಿರುದ್ಧ ಕುಟುಂಬಸ್ಥರ ಆರೋಪ ಮಾಡಿದ್ದಾರೆ.
ಘಟನೆಗೆ ಸಂಬAಧಿಸಿದAತೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.