Wednesday, January 22, 2025
ಬೆಂಗಳೂರುರಾಜ್ಯಸುದ್ದಿ

ಜಯಕರ್ನಾಟಕ ಜನಪರ ವೇದಿಕೆಯ ನೂತನ ರಾಜ್ಯಾಧ್ಯಕ್ಷರಾಗಿ ಶ್ರೀನಿವಾಸ್ .ಜೆ ಹಾಗೂ ದ.ಕ. ಜಿಲ್ಲಾಧ್ಯಕ್ಷರಾಗಿ ಕಾರ್ತಿಕ್ ರೈ ನೇಮಕ ; ಸಂಸ್ಥಾಪಕ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆದ ರಾಜ್ಯ ಪದಾದಿಕಾರಿಗಳ ಪದಗ್ರಹಣ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಂಗಳೂರು : ಜಯಕರ್ನಾಟಕ ಜನಪರ ವೇದಿಕೆಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಇಂದು (ಸೆ.10) ಬೆಂಗಳೂರಿನ ಟೌನ್ ಹಾಲ್ ನಲ್ಲಿ ನಡೆಯಿತು.

ಸಂಸ್ಥಾಪಕ ಅಧ್ಯಕ್ಷರಾದ ಬಿ ಗುಣರಂಜನ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯದ ನೂತನ ಅಧ್ಯಕ್ಷನ್ನಾಗಿ ಶ್ರೀನಿವಾಸ್.ಜೆ ಇವರನ್ನು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಕಾರ್ತಿಕ್ ರೈ ಅವರನ್ನು ಆಯ್ಕೆ ಮಾಡಲಾಯಿತು.ಈ ಸಂದರ್ಭದಲ್ಲಿ ನಿಕಟಪೂರ್ವ ರಾಜ್ಯಾಧ್ಯಕ್ಷರಾದ ಆರ್ ಚಂದ್ರಪ್ಪನವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

3 ವರ್ಷಗಳ ಹಿಂದೆ ಹೊರನಾಡು ತಾಯಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಆರಂಭಿಸಿದ ಜಯಕರ್ನಾಟಕ ಜನಪರ ವೇದಿಕೆ ರಾಜ್ಯಾದ್ಯಂತ ಅನೇಕ ಜಿಲ್ಲೆಗಳಲ್ಲಿ ಅನೇಕ ಜನಪರ ಒಳ್ಳೆಯ ಕಾರ್ಯ, ಹೋರಾಟ ಮತ್ತು ನಮ್ಮ ನಡೆ ಪ್ರಕೃತಿಯ ಕಡೆ ಎಂಬ ಶೀರ್ಷಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಾ ಬಂದಿದೆ.

ಕಾರ್ಯಕ್ರಮಕ್ಕೆ ಆಗಮಿಸಿದ ಸಂಸ್ಥಾಪಕ ಅಧ್ಯಕ್ಷ ಬಿ ಗುಣರಂಜನ್ ಶೆಟ್ಟಿಯವರನ್ನು ಚೆಂಡೆ ವಾದ್ಯಗಳೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿ ಬರಮಾಡಿಕೊಂಡರು.

ರಾಜ್ಯ ಸಂಚಾಲಕರಗಿ ರಾಮದಾಸ್ ಶೆಟ್ಟಿ ಯವರು ಎರಡನೇ ಬಾರಿ ಆಯ್ಕೆ ಯಾದರು

ದಕ್ಷಿಣ ಕನ್ನಡ ಜಿಲ್ಲೆಯ ನಿಕಟ ಪೂರ್ವ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ ತಿಂಗಳಾಡಿ ಯವರನ್ನು ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು.
ಬೆಂಗಳೂರು ಜಿಲ್ಲಾಧ್ಯಕ್ಷರಾಗಿ P. ಲೋಕೇಶ್ ರವರನ್ನು ಆಯ್ಕೆ ಮಾಡಲಾಯಿತು.