Thursday, January 23, 2025
ಸುದ್ದಿ

ಶಾಲೆಗೆ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಆಟೋ ರಿಕ್ಷಾ ಪಲ್ಟಿ : ವಿದ್ಯಾರ್ಥಿಗಳಿಗೆ ಗಾಯ – ಕಹಳೆ ನ್ಯೂಸ್

ಬೆಳ್ತಂಗಡಿ : ಕಲ್ಲೇರಿ ಆಸುಪಾಸಿನಿಂದ ಮೂಡಡ್ಕದ ಅಲ್ ಮದೀನತುಲ್ ಮುನವ್ವರ ಆಂಗ್ಲ ಮಾಧ್ಯಮ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಆಟೋ ರಿಕ್ಷಾಕ್ಕೆ ಮೂರುಗೋಳಿ ಬಳಿ ದ್ವಿಚಕ್ರ ವಾಹನವೊಂದು ಅಡ್ಡ ಬಂದ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭ ಚಾಲಕನ ನಿಯಂತ್ರಣ ಕಳೆದುಕೊಂಡ ಅಟೋ ರಿಕ್ಷಾ ಮಗುಚಿ ಬಿದ್ದಿದೆ. ಘಟನೆಯಿಂದ ರಿಕ್ಷಾದಲ್ಲಿದ್ದ ಶಾಹಿನ್, ಮುಹಮ್ಮದ್ ಶಹೀರ್, ರಿಫಾ ಫಾತಿಮಾ, ಸಿಹಾಲ್, ಅಮೀನ್, ನಾಫೀರ್, ಮಿಷೂರ್ ಸೇರಿದಂತೆ ಒಂಬತ್ತು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಉಪ್ಪಿನಂಗಡಿ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡು ಮನೆಗೆ ಮರಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು