Thursday, January 23, 2025
ಸುದ್ದಿ

ನಾರಾವಿ-ಧರ್ಮಸ್ಥಳ ಕೆ ಎಸ್ ಆರ್ ಟಿ ಸಿ ಬಸ್ ಸಂಚಾರಕ್ಕೆ ಚಾಲನೆ ನೀಡಿದ ಸಚಿವ ದಿನೇಶ್ ಗುಂಡೂರಾವ್ – ಕಹಳೆ ನ್ಯೂಸ್

ಬೆಳ್ತಂಗಡಿ: ಒಂದು ತಿಂಗಳ ಹಿಂದೆ ಮಂಜೂರುಗೊoಡ ನಾರಾವಿ- ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ಸಿಗೆ ಅಳದಂಗಡಿಯಲ್ಲಿ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ ನಮನ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಸರಕಾರದ ಸೌಲಭ್ಯಗಳು ಜನರಿಗೆ ನೇರವಾಗಿ ತಲುಪಬೇಕು, ಮಹಿಳೆಯರಿಗೆ ಸರಕಾರಿ ಬಸ್ಸಿನಲ್ಲಿ ಉಚಿತ ಸೌಲಭ್ಯವಿದ್ದು, ಸ್ವಾತಂತ್ರ‍್ಯ ಬಂದ ಬಳಿಕ ಇದುವರೆಗೆ ಆಗದ ಬಸ್ಸಿನ ವ್ಯವಸ್ಥೆ ಈ ಪ್ರದೇಶಕ್ಕೆ ಸರಕಾರ ಮಾಡಿದೆ ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಾಜಿ ಶಾಸಕ ಕೆ. ವಸಂತ ಬಂಗೇರ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಕಾಂಗ್ರೆಸ್ ನಗರ ಬ್ಲಾಕ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಬ್ಲಾಕ್ ಅಧ್ಯಕ್ಷ ನಾಗೇಶ್ ಕುಮಾರ್, ಮನಪಾ ಸದಸ್ಯ ಎ.ಸಿ.ವಿನಯ್ ರಾಜ್, ಜಿ.ಪಂ. ಮಾಜಿ ಸದಸ್ಯರಾದ ಸಾಹುಲ್ ಹಮೀದ್, ಶೇಖರ್ ಕುಕ್ಕೇಡಿ, ಧರಣೇಂದ್ರ ಕುಮಾರ್, ನಮಿತಾ ಪೂಜಾರಿ, ಗ್ರಾಮೀಣ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಪ್ರಮುಖರಾದ ಪ್ರಶಾಂತ್ ವೇಗಸ್, ಸಂಜೀವ ಪೂಜಾರಿ, ವೀರೇಂದ್ರ ಜೈನ್, ಈಶ್ವರ ಭಟ್ ಎಂ. ಸೆಬಾಸ್ಟಿನ್ ಕಳೆಂಜ, ಯೋಗೀಶ್ ಅಳಕೆ, ರವಿಕೋಟ್ಯಾನ್, ಸಲೀಂ ಜಿ.ಕೆರೆ, ಅಭಿನಂದನ್ ಹರೀಶ್ ಕುಮಾರ್, ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಜಯಕರ ಶೆಟ್ಟಿ, ವಿಭಾಗೀಯ ಸಂಚಾರ ಅಧಿಕಾರಿ ಕೆ.ಮುರಳೀಧರ್ ಆಚಾರ್ಯ, ಧರ್ಮಸ್ಥಳ ಡಿಪ್ಪೋ ಮ್ಯಾನೇಜರ್ ಉದಯ್ ಶೆಟ್ಟಿ ಉಪಸ್ಥಿತರಿದ್ದರು.

ದೇವಿಪ್ರಸಾದ್ ಶೆಟ್ಟಿ ಅಳದಂಗಡಿ ಸ್ವಾಗತಿಸಿದರು. ತಾ.ಪಂ. ಸಂಯೋಜಕ ಜಯಾನಂದ್ ನಿರೂಪಿಸಿದರು. ಸುಭಾಶ್ಚಂದ್ರ ರೈ ಅಳದಂಗಡಿ ವಂದಿಸಿದರು.