Wednesday, January 22, 2025
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ಸೌಜನ್ಯ ಪ್ರಕರಣ : ‌ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲು ಕೊನೆಯ ಉಳಿದಿದೆ 4 ದಿನ ; ದಯಮಾಡಿ ಮೇಲ್ಮನವಿ ಸಲ್ಲಿಸಿ, ಹೈಕೋರ್ಟ್ ಸೂಚನೆಯಂತೆ ಸೌಜನ್ಯ ಮನೆಗೆ ಭೇಟಿ ನೀಡಿ ವಿನಂತಿಸಿಕೊಂಡ ವಿಶ್ವಹಿಂದೂ ಪರಿಷತ್ ಬಜರಂಗದಳದ ಪ್ರಮುಖರು ಹಾಗೂ ಅರ್ಜಿದಾರರು – ಕಹಳೆ‌‌ ನ್ಯೂಸ್

ಸೌಜನ್ಯ ಪ್ರಕರಣ : ‌ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಲು ಕೊನೆಯ ಉಳಿದಿದೆ 4 ದಿನ ; ದಯಮಾಡಿ ಮೇಲ್ಮನವಿ ಸಲ್ಲಿಸಿ, ಹೈಕೋರ್ಟ್ ಸೂಚನೆಯಂತೆ ಸೌಜನ್ಯ ಮನೆಗೆ ಭೇಟಿ ನೀಡಿ ವಿನಂತಿಸಿಕೊಂಡ ವಿಶ್ವಹಿಂದೂ ಪರಿಷತ್ ಬಜರಂಗದಳದ ಪ್ರಮುಖರು ಹಾಗೂ ಅರ್ಜಿದಾರರು

ಬೆಳ್ತಂಗಡಿ : ಸೌಜನ್ಯ ಪ್ರಕರಣದ ವಿಚಾರಣೆ ಆಗ್ರಹಿಸಿ, ಗಿರೀಶ ಭಾರದ್ವಾಜ್ , ನವೀನ್ ಕುಮಾರ್ ನೆರಿಯ ಬೆಳ್ತಂಗಡಿ , ವಿನಾಯಕ ಫ್ರೆಂಡ್ಸ್ ಟ್ರಸ್ಟ್ ಬಲ್ನಾಡು ಪೂತ್ತೂರು ಒಟ್ಟಾಗಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಸಲ್ಲಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕುರಿತು ತೀರ್ಪು ನೀಡಿದ ಹೈಕೋರ್ಟ್ ಸರಕಾರ ಅಥವಾ ಮೂಲದೂರುದಾರರು ಅಥವಾ ಸಂತ್ರಸ್ಥ ಕುಟುಂಬ ಮಾತ್ರ ಆರೋಪಿಯನ್ನ ದೋಷಮುಕ್ತಗೊಳಿಸಿದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾನೂನಿಲ್ಲಿ ಅವಕಾಶವಿದೆ.
ತನಿಖಾಲೋಪದ ಅಂಶವನ್ನ ಮೇಲ್ಮನವಿಯಲ್ಲೇ ಪರಿಗಣಿಸಲು ಕಾನೂನಿಲ್ಲಿ ಅವಕಾಶ ಕಲ್ಪಿಸಲಾಗಿದೆ.
ಸಭೆ,ಸಮಾರಂಭ ,ಧರಣಿ ಹಾಗು ಭಾವನೆಗಳಿಂದ ಕಾನೂನು ಚೌಕಟ್ಟು ಮೀರಲು ಸಾಧ್ಯವಿಲ್ಲ .ಆರ್ಜಿದಾರರ ಉದ್ದೇಶ ಒಳ್ಳೆಯದೇ ಇದ್ದರೂ ಕಾನೂನಿನ ಮಿತಿ ಒಳಗಡೆ ವ್ಯವಹರಿಸಬೇಕಾಗುತ್ತದೆ .
ಸಂತ್ರಸ್ಥ ಕುಟುಂಬಕ್ಕೆ ಮೇಲ್ಮನವಿ ಸಲ್ಲಿಸಲು ಸಹಾಯ ಮಾಡಿ ಎಂದು ಸಲಹೆ ನೀಡಿದ ವಿಭಾಗೀಯ ಪೀಠ
ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಲೇವಾರಿಗೊಳಿಸಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಸೌಜನ್ಯ ಪ್ರಕರಣದ ಮರು ತನಿಖೆಗೆ ಅಗ್ರಹಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ನವೀನ್ ಕುಮಾರ್ ನೆರಿಯ ಹಾಗೂ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಮುಖರು ಸೌಜನ್ಯ ಮನೆಗೆ ಭೇಟಿ ನೀಡಿ ಸೌಜನ್ಯ ಪ್ರಕರಣದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಸಂಧರ್ಭ ಕೊರ್ಟ್ ನಿರ್ದೇಶಿಸಿದಂತೆ ಮರು ತನಿಖೆಗೆ ಸೌಜನ್ಯ ಕುಟುಂಬದವರೇ ಅರ್ಜಿ ಸಲ್ಲಿಸಬೇಕಾಗಿದ್ದು ಈ ವಿಚಾರವನ್ನು ತಿಳಿಸಿ ನ್ಯಾಯಾಂಗ ಹೋರಾಟ ಮತ್ತು ಸೌಜನ್ಯಳಿಗೆ ನ್ಯಾಯಕ್ಕಾಗಿ ತಮ್ಮ ಜೋತೆ ಇದ್ದೇವೆ ಎಂಬ ಭರವಸೆ ನೀಡಲಾಯಿತು.

ಈ ಸಂಧರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್,ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳಿಕೃಷ್ಣ ಹಸಂತ್ತಡ್ಕ,ಬಜರಂಗದಳ ವಿಭಾಗ ಸಹ ಸಂಯೋಜಕ್ ಪುನೀತ್ ಅತ್ತಾವರ,ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ.ನ್ಯಾಯವಾದಿ ಅನಿಲ್ ದಡ್ಡು,ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಅಧ್ಯಕ್ಷರು ದಿನೇಶ್ ಚಾರ್ಮಾಡಿ,ರಮೇಶ್,ಮೋಹನ್ ಹಾಗೂ ಹಲವು ಪ್ರಮುಖರು ಉಪಸ್ಥಿತರಿದ್ದರು.