ನಂಜನಗೂಡು : ಅಪ್ರಾಪ್ತೆಯನ್ನು ವಿವಾಹವಾದ ಆರೋಪ ಹಾಡ್ಯ ಗ್ರಾಮ ಪಂಚಾಯತ್ ಅಧ್ಯಕ್ಷ ಹರೀಶ್ ಕುಮಾರ್ ವಿರುದ್ಧ ನಂಜನಗೂಡು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಂಜನಗೂಡು ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿದ್ದಕ್ಕಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, 2012 ಮತ್ತು ಅತ್ಯಾಚಾರ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.
ಅಪ್ರಾಪ್ತೆ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷನ ಮದುವೆ 2023ರ ಫೆಬ್ರವರಿ 15ರಲ್ಲಿ ನಡೆದಿದ್ದು, ಇದೀಗಾ ಬಾಲಕಿ ಗರ್ಭಿಣಿಯಾಗಿದ್ದಾಳೆ. ಶಾಲಾ ದಾಖಲಾತಿ ಪ್ರಕಾರ ಬಾಲಕಿಯ ಜನ್ಮ ದಿನಾಂಕವು 2005ರ ಮೇ 19 ಆಗಿದ್ದು ಆಕೆಗೆ ಇನ್ನು 18 ವರ್ಷ ತುಂಬದ ಹಿನ್ನಲೆಯಲ್ಲಿ ಅಧ್ಯಕ್ಷ ಹರೀಶ್ ಕುಮಾರ್ ವಿರುದ್ಧ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಗ್ರಾಮಸ್ಥರು ಈ ಬಗ್ಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸಲ್ಲಿಸಿದ್ದು, ಹೀಗಾಗಿ ಕಾನೂನು ಉಲ್ಲಂಘಿದ ಹರೀಶ್ಕುಮಾರ್ ತನ್ನ ಗ್ರಾ. ಪಂ ಅಧ್ಯಕ್ಷ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಇದೆ.