ಅಕ್ರಮವಾಗಿ ಎಂಡಿಎoಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನ ಬಂಧಿಸಲಾಗಿದೆ.
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಒಂಬತ್ತು ಕರೆ ಬಳಿ ದ್ವಿಚಕ್ರ ವಾಹನವೊಂದರಲ್ಲಿ ಅಕ್ರಮವಾಗಿ ಎಂಡಿಎoಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಒಂಭತ್ತು ಕೆರೆ ನಿವಾಸಿ ಅಬ್ದುಲ್ ಸವಾಜ್ ಯಾನೆ ಚವ್ವಾ (30) ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಯಿಂದ 25 ಗ್ರಾಂ ತೂಕದ ರೂ. 1,25,000 ಮೌಲ್ಯದ ಎಂಡಿಎoಎ ಮಾದಕ ವಸ್ತು, ಹೊಂಡಾ ಅಕ್ಟಿವಾ ಸ್ಕೂಟರ್, ಒಂದು ಮೊಬೈಲ್ ಫೋನ್, 2120 ರೂ. ನಗದು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಂಡಿದ್ದಾರೆ.
ಪೊಲೀಸರು ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 2,17,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು ನಗರದ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಪೊಲೀಸರು ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ನಡೆಸಿದ್ದಾರೆ.