ರಾಜ್ಯ ಸರಕಾರದ ರೈತ ವಿರೋಧಿ ನೀತಿಯ ವಿರುದ್ಧ ಬಿಜೆಪಿ ರೈತ ಮೋರ್ಚಾ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ, ಪುತ್ತೂರಿನ ತಾಲೂಕು ಸೌಧದ ಬಳಿಯ ಅಮರ್ ಜವಾನ್ ಜ್ಯೊತಿ ಸ್ಮಾರಕದ ಬಳಿ ಪ್ರತಿಭಟನೆ ನಡೆದಿದೆ.
ಪ್ರತಿಭಟನೆಯಲ್ಲಿ ಮಾತನಾಡಿದ ರಾಜ್ಯ ರೈತ ಮೂರ್ಚಾ ಕಾರ್ಯದರ್ಶಿ ಡಾ. ನವೀನ್ ಇವರು, ರಾಷ್ಟ್ರೀಯ ವಿಚಾರಧಾರೆಗಳಲ್ಲಿ ಬಿಜೆಪಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಹಿಂದುಗಳ ವಿರೋಧವಾಗಿರುವ ಕಾಂಗ್ರೆಸ್ ಸರ್ಕಾರವನ್ನು ನಿರ್ಲಕ್ಷ್ಯಿಸುವ ಕಾರ್ಯ ಲೋಕಸಭಾ ಚುನಾವಣೆಯ ಸಂದರ್ಭ ಮಾಡಬೇಕಾಗಿದೆ. ಕೃಷಿ ಹಾಗೂ ಕೃಷಿ ಕ್ಷೇತ್ರಕ್ಕೆ 1.50ಲಕ್ಷ ಕೋಟಿ ಬಿಜೆಪಿ ಸರ್ಕಾರ ನೀಡಿದೆ. ಜನರಲ್ಲಿರುವ ಕಾಂಗ್ರೆಸ್ ವಿರೋಧಿ ಮನಸ್ಥಿತಿಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗಿದೆ. 312 ತಾಲೂಕುಗಳಲ್ಲಿ ಹೋರಾಟ ನಡೆಸಲಾಗುತ್ತಿದೆ. ಬರವನ್ನು ನಿಭಾಯಿಸುವ ಸಾಮಾನ್ಯ ಜ್ಞಾನವೂ ಸರ್ಕಾರಕ್ಕೆ ಇಲ್ಲ ಎಂದರು.
ಮಾಜಿ ವಾಸಕ ಸಂಜೀವ ಮಠಂದೂರು ಮಾತನಾಡಿ, 190 ತಾಲೂಕಿನಲ್ಲಿ ಬರವಿದ್ದು, ಬರ ಪೀಡಿತ ಪ್ರದೇಶಗಳ ಅಧ್ಯಯನವನ್ನು ಮಾಡಬೇಕಾದ ಸಿದ್ದರಾಮಯ್ಯ ವಿಧಾನ ಸೌಧ ದಿಂದ ಹೊರ ಬರುತ್ತಿಲ್ಲ. ನಾಲ್ಕು ಕಾಲುಗಳು ಯಾವಾಗ ಅಲುಗಾಡುತ್ತದೋ ಎಂದು ತಿಳಿಯದೆ, ಮುಖ್ಯ ಮಂತ್ರಿಗಳು ಕುರ್ಚಿ ಬಿಟ್ಟು ಏಳುತ್ತಿಲ್ಲ. ದಿನಕ್ಕೆ ಇಬ್ಬರಂತೆ 170ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಅಂದರೆ ಬರ, ಬಿಜೆಪಿ ಅಂದರೆ ಸಮೃದ್ಧಿ ಎಂಬುದು ದೃಢವಾಗಿದೆ. ವಿದ್ಯುತ್ ಖರೀದಿಯಿಂದ ಸರ್ಕಾರ ಬ್ರಷ್ಟಾಚಾರ ಪ್ರಾರಂಭವಾಗಿದೆ. ರೈತರ ಕೃಷಿ ಸಾಲಗಳ ಬಗ್ಗೆ ಮಾಡಿದ ಘೋಷಣೆ ಇನ್ನೂ ಜಾರಿಯಾಗಿಲ್ಲ. ಕರ್ನಾಟಕ ಜನರನ್ನು ಕತ್ತಲೆಯಲ್ಲಿ ಹಾಕಿದ ಕಾಂಗ್ರೆಸ್ ಗೆ ಜನ ಹಿಡಿ ಶಾಪ ಹಾಕುತ್ತಿದ್ದಾರೆ. ಹಳ್ಳಿಯಲ್ಲಿ ಹೋರಾಟವನ ಎಂದು ತಿಳಿಸಿದರು.
ನೆಲ್ಲಿಕಟ್ಟೆ ಖಾಸಗೀ ಬಸ್ ನಿಲ್ದಾಣದಿಂದ ಪುತ್ತೂರು ಆಡಳಿತ ಸೌಧದವರೆಗೆ ರೈತರ ಮೆರವಣಿಗೆ ನಡೆಯಿತು. ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ನೀಡಲಾಯಿತು.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ರೈತ ಮೊರ್ಚಾದ ಜಿಲ್ಲಾ ಡಾ.ನವೀನ್, ಬಿಜೆಪಿ ರೈತ ಮೋರ್ಚಾದ ಮಂಡಲದ ಅಧ್ಯಕ್ಷ ಸುರೇಶ್ ಕಣ್ಣರಾಯ, ಕಾರ್ಯದರ್ಶಿ ಮಾಡತ್ತಾರು, ಬಿಜೆಪಿ ಮಂಡಲದ ಅಧ್ಯಕ್ಷ ಸಾಜರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಜಿಲ್ಲಾ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಎಸ್.ಅಪ್ಪಯ್ಯ ಮಣಿಯಾಣಿ, ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿ.ಪಂ ಮಾಜಿ ಅಧ್ಯಕ್ಷ ಅಶಾ ತಿಮ್ಮಪ್ಪ ಗೌಡ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಜಿಲ್ಲಾ ಹಿಂದುಳಿದ ಮೋರ್ಚಾ ಅಧ್ಯಕ್ಷ ಆರ್ ಸಿ ನಾರಾಯಣ, ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಭಟ್ ಕೆದಿಲ, ವಸಂತ್, ಮಹೇಶ್ ಮೇನಾಲ ಸಹಿತ ಹಲವಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದರು.