Thursday, January 23, 2025
ಸುದ್ದಿ

ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಬೆಟ್ಟಂಪಾಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಸಹಭಾಗಿತ್ವದಲ್ಲಿ ನಡೆದ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.


ಬಾಲಕರ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಅಖಿಲೇಶ್ ವರ್ಮ,ವಿಘ್ನೇಶ್ ಚಂದ್ರಕಾAತ್ ಯಾದವ್, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಕೆ. ಎಸ್ ಗೌತಮ್, ಪ್ರಚೇತ ಸಿಂಹ, ಕೃಷ್ಣ ಜಿ ಆರ್, ಸನ್ನಿಧಿ ಎಂ ಭಾಗವಹಿಸಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು