Thursday, January 23, 2025
ಸುದ್ದಿ

ಉಡುಪಿ ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಉಡುಪಿ ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ ಇಂದು ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಭೆಯಲ್ಲಿ ಶಾಸಕರು ಡೆಂಗ್ಯೂ ರೋಗ ತಡೆಗೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮತ್ತು ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿರುವ ಡಯಾಲಿಸಿಸ್ ಘಟಕವನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿ ಲೋಕೋಪಯೋಗಿ ಮತ್ತು ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಯ ಪ್ರಗತಿಯ ಬಗ್ಗೆ ಮಾಹಿತಿ ಪಡೆದು ವಿವಿಧ ಇಲಾಖೆಗಳಲ್ಲಿ ಸಿಬ್ಬಂದಿಗಳ ಕೊರತೆಯ ಇದ್ದು ಆಡಳಿತಾತ್ಮಕ ಹಿತ ದೃಷ್ಟಿಯಿಂದ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಸರಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಉಡುಪಿ ತಾಲೂಕು ಪಂಚಾಯತ್ ಆಡಳಿತಾಧಿಕಾರಿಗಳಾದ ರವೀಂದ್ರ, ಉಡುಪಿ ತಾಲೂಕು ಕಾರ್ಯ ನಿರ್ವಹಣಾಧಿಕಾರಿಗಳಾದ ವಿಜಯ ಮತ್ತು ಉಡುಪಿ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.