Sunday, November 24, 2024
ಕ್ರೈಮ್ರಾಷ್ಟ್ರೀಯಸುದ್ದಿ

ಸನಾತನ ಧರ್ಮ ವಿವಾದ ; ವಿಶ್ವ ಹಿಂದೂ ಪರಿಷತ್ ದೂರಿನಡಿ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್​ಐಆರ್​ ದಾಖಲು! – ಕಹಳೆ ನ್ಯೂಸ್

ಮುಂಬೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರ ಪುತ್ರ ಡಿಎಂಕೆ ನಾಯಕ, ಸಚಿವ ಉದಯನಿಧಿ ಸ್ಟಾಲಿನ್, ಕಳೆದ ಕೆಲವು ದಿನಗಳ ಹಿಂದೆ ಸನಾತನ ಧರ್ಮದ ವಿರುದ್ಧ ನೀಡಿದ್ದ ಹೇಳಿಕೆಗೆ ಇದೀಗ ಮುಂಬೈ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಸನಾತನ ಧರ್ಮದ ಕುರಿತು ಉದಯನಿಧಿ ಸ್ಟಾಲಿನ್ ನೀಡಿದ್ದ ಹೇಳಿಕೆಗೆ ದೇಶವ್ಯಾಪಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ವ್ಯಾಪಕ ಟೀಕೆಗೆ ಗುರಿಯಾಗಿದ್ದ ಡಿಎಂಕೆ ನಾಯಕನ ವಿರುದ್ಧ ಮುಂಬೈನ ರಾಜಧಾನಿ ಮಹಾರಾಷ್ಟ್ರದಲ್ಲಿ ಎಫ್‌ಐಆರ್ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಂಬೈನ ಮೀರಾ ರೋಡ್ ಪೊಲೀಸರು ಐಪಿಸಿ ಸೆಕ್ಷನ್ 153 ಎ ಮತ್ತು 295 ಎ ಅಡಿಯಲ್ಲಿ ಉದಯನಿಧಿ ಸ್ಟಾಲಿನ್​ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉದಯನಿಧಿ ವಿರುದ್ಧ ವಿಶ್ವ ಹಿಂದೂ ಪರಿಷತ್ (VHP) ಮೀರಾ ರೋಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸಂಬಂಧಪಟ್ಟ ಅಧಿಕಾರಿ ಕಾನೂನು ಕೋಶದೊಂದಿಗೆ ಚರ್ಚಿಸಿ ಪ್ರಕರಣ ದಾಖಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿವಾದಕ್ಕೆ ಕಾರಣವೇನು?: ಸೆಪ್ಟೆಂಬರ್ 2 ರಂದು ತಮಿಳುನಾಡಿನ ಚೆನ್ನೈನಲ್ಲಿ ಪ್ರಗತಿಪರ ಲೇಖಕರು ಮತ್ತು ಕಲಾವಿದರ ಸಂಘವನ್ನು ಉದ್ದೇಶಿಸಿ ಮಾತನಾಡಿದ ಸಚಿವ ಉದಯನಿಧಿ ಸ್ಟಾಲಿನ್, ‘ಕೊರೊನಾ, ಮಲೇರಿಯಾ, ಡೆಂಗ್ಯೂ ವೈರಸ್ ಮತ್ತು ಸೊಳ್ಳೆ ವೈರಸ್​ಗಳನ್ನು ನಿರ್ಮೂಲನೆ ಮಾಡಿದಂತೆ, ಸನಾತನ ಧರ್ಮವನ್ನು ಕೂಡ ನಿರ್ಮೂಲನೆ ಮಾಡಬೇಕು’ ಎಂದು ಹೇಳಿದರು. ಸದ್ಯ ಈ ಹೇಳಿಕೆ ಇದೀಗ ದೇಶವ್ಯಾಪಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

(ಏಜೆನ್ಸೀಸ್).