Wednesday, January 22, 2025
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಉದ್ಯಮಿ ಗೋವಿಂದ ಬಾಬು ಪೂಜಾರಿಯವಗೆ ಕೋಟ್ಯಂತರ ರೂ. ವಂಚಿಸಿದ ಆರೋಪ ; ‘ಚೈತ್ರಾ ಕುಂದಾಪುರ’ ಸೇರಿ 6 ಆರೋಪಿಗಳು 10 ದಿನ ‘ಸಿಸಿಬಿ’ ಕಸ್ಟಡಿಗೆ – ಕಹಳೆ ನ್ಯೂಸ್

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ರೂಪಾಯಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ್ತಿ, ಹಿಂದೂ ನಾಯಕಿ ಚೈತ್ರಾ ಕುಂದಾಪುರ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಹಾಗೂ ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್, ಧನರಾಜ್ ನನ್ನು ಬಂಧಿಸಿದ್ದ ಬೆಂಗಳೂರು ಸಿಸಿಬಿ ಪೊಲೀಸರು, ಆರೋಪಿಗಳನ್ನು ಕೋರ್ಟ್ ಗೆ ಹಾಜರು ಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ 14 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರ ಬಳಿ ಮನವಿ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪೊಲೀಸರ ಮನವಿ ಆಲಿಸಿದ ನ್ಯಾಯಾಧೀಶರು ಸೆ.23ರವರೆಗೆ ಆರೋಪಿಗಳನ್ನು ಸಿಸಿಬಿ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೋರ್ಟ್ ನಲ್ಲಿ ಚೈತ್ರಾ, ಜಡ್ಜ್ ಎದುರು ಕಣ್ಣೀರು ಹಾಕಿ, ‘ನನಗೆ ಪೊಲೀಸರು ಕಿರಿಕಿರಿ ಮಾಡಿದ್ದಾರೆ’ ಎಂದು ಹೇಳಿರುವುದಾಗಿ ವರದಿಯಾಗಿದೆ.

ವಿಧಾನಸಭಾ ಚುನಾವಣೆ ವೇಳೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.