Wednesday, January 22, 2025
ಸುದ್ದಿ

ನಾಪತ್ತೆಯಾಗಿದ್ದ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ವೇಣೂರಿನಲ್ಲಿ ಪತ್ತೆ – ಕಹಳೆ ನ್ಯೂಸ್

ಬಂಟ್ವಾಳ: ನಾಪತ್ತೆಯಾಗಿದ್ದ ಅಮ್ಟಾಡಿ ಗ್ರಾಮಪಂಚಾಯತ್ ಗ್ರೇಡ್ 1 ಕಾರ್ಯದರ್ಶಿ ವೇಣೂರು ಎಂಬಲ್ಲಿ ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಮನೆಯವರು ಅವರನ್ನು ಮನೆಗೆ ಕರೆಸಿಕೊಂಡು ಬಂದಿದ್ದಾರೆ.

ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಆಚಾರ್ಯ (75) ಎಂಬವರು ನಾಪತ್ತೆಯಾಗಿದ್ದು ಅವರ ಮೊಬೈಲ್ ವಾಲ್ಪಾಡಿಯ ಕೊಯ ಕ್ಕುಡೆ ಚಡಾವ್ ಎಂಬಲ್ಲಿ ಪತ್ತೆಯಾಗಿದೆ. ಎಂದು ಹೇಳಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಪಂಚಾಯತ್ ಕಾರ್ಯದರ್ಶಿಯಾಗಿರುವ ಲಕ್ಷ್ಮೀನಾರಾಯಣ ಅವರ ನಾಪತ್ತೆ ಬಗ್ಗೆ ಅವರ ಪತ್ನಿ ವಂದನಾ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿತ್ತು. ಅದರಂತೆ ಅವರ ಮೊಬೈಲ್ ಲೊಕೇಶನ್ ಹಾಕಿದಾಗ ವಾಲ್ಪಾಡಿ ಕೊಯಕುಡೆ ಚಡಾವ್ ತೋರಿಸುತ್ತಿದ್ದುದರಿಂದ ಪುಂಜಾಲ್ಕಟ್ಟೆ ಪೊಲೀಸರು ಮತ್ತು ಸಂಬAಧಿಕರು ಹುಡುಕಾಡಿಕೊಂಡು ಬಂದಿದ್ದರು. ಅದರೆ ಅವರ ಮೊಬೈಲ್ ಮಾತ್ರ ರಸ್ತೆ ಬದಿ ಪತ್ತೆಯಾಗಿದ್ದು ಬೈಕ್ ನಲ್ಲಿ ಬಂದಿದ್ದ ಲಕ್ಷ್ಮೀನಾರಾಯಣ ಪತ್ತೆಯಾಗಿರಲಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೆ.ಎ.-21 , ಇಅ 5599 ನಂಬರ್ ನ ಹೀರೊ ನೀಲಿ ಬಣ್ಣದ ಬೈಕ್ ನಲ್ಲಿ ಅವರು ಬಂದಿದ್ದರೆನ್ನಲಾಗಿದೆ .ಮೊಬೈಲ್ ನ್ನು ವಾಲ್ಪಾಡಿಯಲ್ಲಿ ಎಸೆದು ಬೈಕ್ ನಲ್ಲಿ ಹೋಗಿರಬಹುದೆಂದು ಹೇಳಲಾಗುತ್ತಿತ್ತು.

ಪರೀಕ್ಷೆಗಾಗಿ ತೆರಳಿದ್ದರಾ?
ಸೆ. 8 ರಂದು ಅಮ್ಟಾಡಿ ಗ್ರಾ.ಪಂ.ನಲ್ಲಿ ಗ್ರಾಮ ಸಭೆನಡೆದ ಬಳಿಕ ಇವರು ತುಂಬಾ ಒತ್ತಡದಲ್ಲಿದ್ದರು ಎಂದು ಹೇಳಲಾಗಿದೆ. ಮಾನಸಿಕವಾಗಿ ನೊಂದುಕೊAಡಿದ್ದ ಅವರು ಇತ್ತೀಚೆಗೆ ಬಹಳಷ್ಟು ಕುಗ್ಗಿ ಹೋಗಿದ್ದರು. ಇಲ್ಲಿನ ಪಿ.ಡಿ.ಒ.ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ ಇವರಿಗೆ ಹೆಚ್ಚವರಿಯಾಗಿ ಪಿ.ಡಿ.ಒ.ಹುದ್ದೆಯನ್ನು ನೀಡಲಾಗಿತ್ತು. ಆದರೆ ಇವರು ಎರಡು ಹುದ್ದೆಯನ್ನು ನಿಭಾಯಿಸಲು ಸಾಧ್ಯವಾಗದೆ ನೊಂದುಕೊAಡಿದ್ದರು ಎನ್ನಲಾಗಿದೆ.

ಒತ್ತಡದಿಂದ ಇವರು ಅನಾರೋಗ್ಯಕ್ಕೆ ತುತ್ತಾಗಿದ್ದಾರಾ? ಎಂಬ ಪ್ರಶ್ನೆಯನ್ನು ಹಾಕುತ್ತಿದ್ದಾರೆ. ಅವರು ಸೆ. 12 ರಂದು ಮಧ್ಯಾಹ್ನ 12 ಗಂಟೆವರೆಗೆ ಆಫೀಸಿಗೆ ಬರದ ಕಾರಣ ಇಲ್ಲಿನ ಸಿಬ್ಬಂದಿ ಪೋನ್ ಮಾಡಿದಾಗ ನನಗೆ ಹುಷಾರಿಲ್ಲ ಕೆಲವೊಂದು ಟೆಸ್ಟ್ ಗಳನ್ನು ಇಸಿಜಿ ಸಹಿತ ಇನ್ನೂ ಕೆಲವು ಪರೀಕ್ಷೆ ನಡೆಸಿ ಮತ್ತೆ ಬರುವುದಾಗಿ ತಿಳಿಸಿದ್ದರಂತೆ. ಆ ಬಳಿಕ ಅಫೀಸಿಗೆ ಬರದೆ ಮನೆಗೂ ಹೋಗದೆ ಪೋನ್ ಸ್ವೀಚ್ ಆಫ್ ಆಗಿತ್ತು.