Thursday, January 23, 2025
ಸುದ್ದಿ

ಕೇರಳದಲ್ಲಿ ನಿಫಾ ದೃಢ ; ದ.ಕ. ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ – ಕಹಳೆ ನ್ಯೂಸ್

ಕೇರಳದಲ್ಲಿ ನಿಫಾ ವೈರಸ್ ದೃಢಪಟ್ಟಿದ್ದು, ಕೇರಳದ ಗಡಿಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ ಇಡಲಾಗಿದೆ.


ಜಿಲ್ಲೆಯಲ್ಲಿ ಜ್ವರ ಸಮೀಕ್ಷೆ ನಡೆಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವಿಶೇಷ ಸೂಚನೆ ನೀಡಲಾಗಿದ್ದು, ವೆನ್ಲಾಕ್ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ನಿಫಾ ಐಸೋಲೇಶನ್ ವಾರ್ಡ್ ಮೀಸಲಿಗೆ ಸೂಚಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ (ಪ್ರಭಾರ) ಡಾ. ಸುದರ್ಶನ್ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ರೈನ್ ಫೀವರ್, ನಿಫಾ ಲಕ್ಷಣ ಕಂಡುಬAದರೆ ಸೂಚನೆ ನೀಡುವಂತೆ ಖಾಸಗಿ ವೈದ್ಯಕೀಯ ಕಾಲೇಜು, ಆಸ್ಪತ್ರೆಗಳಿಗೂ ನಿರ್ದೇಶನ ನೀಡಲಾಗಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ದ.ಕ. ಜಿಲ್ಲೆಯಲ್ಲಿ ಈವರೆಗೆ ಯಾವುದೇ ನಿಫಾ ವೈರಸ್ ಪ್ರಕರಣ ದೃಢಪಟ್ಟಿಲ್ಲ. ಆದರೂ ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.