ಮಂಗಳೂರು: 800 ವರ್ಷಗಳಿಂದ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದ ದೇವಾಲಯದ ಆಡಳಿತ ಮಂಡಳಿಯ ನಿಯಮಕ್ಕೆ ಬದಲಾಗಿ, ಮಹಿಳೆಯರಿಗೆ ಪ್ರವೇಶಕ್ಕೆ ಅನುಮತಿ ನೀಡಿ ಸೆ.28 ರಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿತ್ತು.
ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ಕೇರಳ ಸರ್ಕಾರ ಸ್ಪಷ್ಟಪಡಿಸಿದ ಮೇಲೆ ರಾಷ್ಟ್ರೀಯ ಅಯ್ಯಪ್ಪ ಭಕ್ತರ ಸಂಘಟನೆಯು ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸೋಮವಾರ ಮೇಲ್ಮನವಿ ಸಲ್ಲಿಸಿತ್ತು.
ಈ ಮೇಲ್ಮನವಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕು ಎಂಬ ರಾಷ್ಟ್ರೀಯ ಅಯ್ಯಪ್ಪ ಭಕ್ತರ ಸಂಘಟನೆಯ ಮನವಿಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್, ಈ ಕುರಿತ ವಿಚಾರಣೆಯನ್ನು ತುರ್ತಾಗಿ ಮಾಡುವ ಅಗತ್ಯವಿಲ್ಲ ಎಂದಿದೆ.