Saturday, January 25, 2025
ಸುದ್ದಿ

“ನಮ್ಮ ಬೇಡಿಕೆಗಳನ್ನು ಈಡೇರಿಸಿ”- ಉಡುಪಿ ಜಿಲ್ಲೆಯ ಕಟ್ಟಡ ಸಾಮಗ್ರಿ ಸಾಗಾಟ ಲಾರಿ, ಟೆಂಪೋ ಮಾಲೀಕರ ಸಂಘದಿಂದ ಮನವಿ – ಕಹಳೆ ನ್ಯೂಸ್

ಉಡುಪಿ : ಕಟ್ಟಡ ಸಾಮಗ್ರಿ ಸಾಗಾಟ ಲಾರಿ ಟೆಂಪೋ ಮಾಲೀಕರ ಸಂಘಟನೆಗಳ ಒಕ್ಕೂಟ ಉಡುಪಿ ಜಿಲ್ಲೆಯಿಂದ ಜಿಲ್ಲೆಯ ವಿವಿಧ ಪಕ್ಷಗಳ ಮಾಜಿ, ಹಾಲಿ ಶಾಸಕರನ್ನು ಹಾಗೂ ಪಕ್ಷದ ಮುಖಂಡರ ಸಮ್ಮುಖದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಭೆ ಕರೆಯಲಾಗಿತ್ತು. ನಗರದ ಅಮೃತ್ ಗಾರ್ಡನ್‌ನಲ್ಲಿ ಈ ಸಭೆ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಭೆಯಲ್ಲಿ ಮಾತನಾಡಿದ ಶಾಸಕ, ಮಾಜಿ ಸಚಿವ ಸುನಿಲ್ ಕುಮಾರ್, ಲೈಫ್ ಟ್ಯಾಕ್ಸ್ ಹಾಗೂ ಜಿಪಿಎಸ್ ಕ್ಯಾಮರಾ ಅಳವಡಿಸುವ ವಿಚಾರವನ್ನು ನಮ್ಮೆಲ್ಲ ಶಾಸಕರ ಗಮನಕ್ಕೆ ತಂದು ಸರ್ಕಾರದ ಕೆಲ ಆದೇಶಗಳನ್ನು ಹಿಂಪಡೆಯುವಂತೆ ಆಗ್ರಹಿಸುತ್ತೇವೆ. ಅಗತ್ಯವಿದ್ದಲ್ಲಿ ಪ್ರತಿಭಟನೆಯಲ್ಲೂ ಭಾಗವಹಿಸುತ್ತೇವೆ. ಜನಪ್ರತಿನಿಧಿಗಳು ನಿಮ್ಮೊಂದಿಗೆ ಇದ್ದೇವೆ ಎಂದು ಭರವಸೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಭೆಯಲ್ಲಿ ಮಾತನಾಡಿದ ಲಾರಿ ಟೆಂಪೋ ಮಾಲೀಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.