Sunday, January 19, 2025
ಸುದ್ದಿ

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ- ಮಂಗಳೂರಿನ ಯುವಕ ದಾರುಣ ಅಂತ್ಯ -ಕಹಳೆ ನ್ಯೂಸ್

ಬೆಂಗಳೂರಿನಲ್ಲಿ ಭೀಕರವಾದ ರಸ್ತೆ ಅಪಘಾತವೊಂದು ಸಂಭವಿಸಿದ್ದು ಈ ಅಪಘಾತದಲ್ಲಿ ಮಂಗಳೂರಿನ ಯುವಕ ದಾರುಣ ಅಂತ್ಯ ಕಂಡಿದ್ದಾನೆ.


ಬೆoಗಳೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ಮಂಗಳೂರು ನಗರದ ಕುದ್ರೋಳಿಯ ನಾಹಿದ್ ಸಫಾನ್ (28) ಮೃತಪಟ್ಟ ಯುವಕನಾಗಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರಿನ ಖಾಸಗಿ ಸಂಸ್ಥೆಯೊoದರಲ್ಲಿ ಕೆಲಸ ಮಾಡುತ್ತಿದ್ದರು. ಸಫಾನ್ ಗುರುವಾರ ಅಪರಾಹ್ನ ಯಲಹಂಕದಿAದ ಬೆಂಗಳೂರು ಕಡೆಗೆ ಸರ್ವಿಸ್ ರಸ್ತೆಯಲ್ಲಿ ತೆರಳುತ್ತಿದ್ದಾಗ ಯಲಹಂಕ ಬಿಬಿ ರಸ್ತೆಯ ಏರೋ ಡ್ರಂ ಬಳಿ ಯಾವುದೋ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಒಂದುವರೆ ವರ್ಷದ ಹಿಂದೆ ವಿವಾಹವಾಗಿದ್ದ ನಾಹಿದ್ ಸಫಾನ್ ತಂದೆ ಮತ್ತು ತಾಯಿ ಹಾಗೂ ಅಣ್ಣ, ಅಕ್ಕ, ಪತ್ನಿಯನ್ನು ಅಗಲಿದ್ದಾರೆ.