ಬೆಂಗಳೂರು : ಬೆಂಗಳೂರಿನ ವಿಧಾನಸೌಧದ ನಡೆದ ಸಮಿತಿ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಸಭೆಯಲ್ಲಿ ಭಾರಿ ಮತ್ತು ಮಧ್ಯಮ ಜಲ ಸಂಪನ್ಮೂಲ ಇಲಾಖೆಯ ಅಧೀನದಲ್ಲಿ ಬರುವ ಪ್ರಾಧಿಕಾರ, ನಿಗಮ,ನಿಯಮಿತ ಇವುಗಳ ಬಾಕಿ ಇರುವ ವಾರ್ಷಿಕ ಲೆಕ್ಕ ಸಂಶೋದನಾ ವರದಿಗಳ ವಿಧಾನಮಂಡಲಕ್ಕೆ ಸಲ್ಲಿಸದಿರುವ ಅಥವಾ ಸಲ್ಲಿಸುವಲ್ಲಿ ಆಗಿರುವ ವಿಳಂಬದ ಬಗ್ಗೆ ಮುಖ್ಯಸ್ಥರು ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.