Saturday, January 25, 2025
ಸುದ್ದಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ – ಕಹಳೆ ನ್ಯೂಸ್

ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ನಿನ್ನೆ ಆಚರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಪ್ರಾಂಶುಪಾಲರಾದ ವಂ|ಡಾ| ಆಂಟೊನಿ ಪ್ರಕಾಶ್ ಮೊಂತೆರೋರವರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಬೇಕೆಂದು ಕರೆನೀಡಿದರು. ಭಾರತದ ಸಂವಿಧಾನವು ದೇಶದಎಲ್ಲಾ ಪ್ರಜೆಗಳಿಗೆ ನ್ಯಾಯ, ಸ್ವಾತಂತ್ರ‍್ಯ, ಸಮಾನತೆಯ ಹಕ್ಕುಗಳನ್ನು ಕೊಟ್ಟಿದೆ. ಪ್ರಜೆಗಳೆಲ್ಲರೂ ದೇಶದ ಅಭಿವೃದ್ಧಿಯ ಕುರಿತಾಗಿ ಚಿಂತನೆ ನಡೆಸಬೇಕು ಹಾಗೂ ಒಗ್ಗಟ್ಟಿನಿಂದ ಬಾಳಬೇಕು ಎಂಬ ಸಂದೇಶ ನೀಡಿದರು. ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಬದ್ಧತೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಕ್ಯಾಂಪಸ್ ನಿರ್ದೇಶಕರಾದ ವಂ| ಸ್ಟ್ಯಾನಿ ಪಿಂಟೋ, ಉಪ ಪ್ರಾಂಶುಪಾಲರುಗಳಾದ ಡಾ| ಎ ಪಿ ರಾಧಾಕೃಷ್ಣ, ಪ್ರೊ| ಗಣೇಶ್ ಭಟ್, ಕಾಲೇಜಿನ ವಿದ್ಯಾರ್ಥಿಸಂಘದ ಪದಾಧಿಕಾರಿಗಳಾದ ವಿಪಿನ್ ಹೆಚ್ ಜಿ, ಕೆ ಸಮೃದ್ಧಿ ಶೆಣೈ, ಮತ್ತು ರಕ್ಷಾ ಪಿ ಬಿ ಉಪಸ್ಥಿತರಿದ್ದರು.