Saturday, January 25, 2025
ಸುದ್ದಿ

ಬಂಟ್ವಾಳ ಗ್ರಾಮಾಂತರ ಪೋಲೀಸರಿಂದ ಮಾನವೀಯ ಕೆಲಸ : ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಗೆ ಧನಸಹಾಯ – ಕಹಳೆ ನ್ಯೂಸ್

ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯ ಔಷಧೀಯ ಖರ್ಚಿಗಾಗಿ ಬಂಟ್ವಾಳ ಗ್ರಾಮಾಂತರು ಪೋಲೀಸರಿಂದ ಧನ ಸಹಾಯ ಮಾಡಿದ ವರದಿಯಾಗಿದೆ. ಠಾಣೆಯ ಕೆಲಸಕ್ಕಾಗಿ ಬರುತ್ತಿದ್ದ ವನಿತಾ ಎಂಬ ಮಹಿಳೆಗೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ನೇತ್ರತ್ವದಲ್ಲಿ ಸುಮಾರು 27000 ಸಾವಿರ ನಗದು ಹಣವನ್ನು ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

‌‌ಬಂಟ್ವಾಳ ಪೇಟೆ ನಿವಾಸಿಯಾಗಿರುವ ವನಿತ ಅವರು ತೀರಾ ಬಡತನದ ಕುಟುಂಬದಲ್ಲಿ ಜೀವನ ಮಾಡುವವರು. ಅವರು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಶುಚಿತ್ವದ ಕೆಲಸಕ್ಕಾಗಿ ಬರುತ್ತಿದ್ದರು. ಆದರೆ ಇತ್ತೀಚೆಗೆ ಮನೆಯ ಸಮೀಪ ಬಿದ್ದ ಕೈಯ ಮೂಳೆ ಮುರಿತಕ್ಕೆ ಒಳಗಾಗಿ ಕೆಲಸಕ್ಕೆ ಬರಲು ಅಸಾಧ್ಯವಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ತೀರಾ ಬಡತನದಲ್ಲಿರುವ ವನಿತಾ ಅವರಿಗೆ ಕೆಲಸ ಮಾಡಿದರೆ ಮೂರು ಹೊತ್ತು ಊಟ ಎಂಬ ಪರಿಸ್ಥಿತಿ .ಹಾಗಾಗಿ ಕಳೆದ ಕೆಲವು ತಿಂಗಳ ಕಾಲ ದುಡಿಮೆ ಇಲ್ಲದೆ ಕಷ್ಟದ ಸ್ಥಿತಿಯಲ್ಲಿರುವ ವಿಚಾರ ಪೋಲೀಸರ ಗಮನಕ್ಕೆ ಬಂದಿತು.

ಇವರ ಕಷ್ಟವನ್ನು ತಿಳಿದ ಬಂಟ್ವಾಳ ಪೋಲೀಸರು ವನಿತಾ ಅವರ ಮನೆಯ ಖರ್ಚಿಗಾಗಿ ಠಾಣೆಯಲ್ಲಿ ಸಿಬ್ಬಂದಿಗಳಿಂದ ಒಟ್ಟುಗೂಡಿಸಿದ ನಗದು ಹಣವನ್ನು ಅವರಿಗೆ ಹಸ್ತಾಂತರ ಮಾಡಿದರು.