Friday, January 24, 2025
ಸುದ್ದಿ

ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದ ಶಾರದಾ ಶೋಭಾಯಾತ್ರೆಯ ಸಂಚಾಲಕರಾಗಿ ಸೀತಾರಾಮ ರೈ ಕೆದಂಬಾಡಿಗುತ್ತು ಆಯ್ಕೆ – ಕಹಳೆ ನ್ಯೂಸ್

ಪುತ್ತೂರು : ಶ್ರೀ ಶಾರದಾ ಭಜನಾ ಮಂದಿರದ ನವರಾತ್ರಿ ಉತ್ಸವ ಸಮಿತಿಯ ಸಭೆಯು ರಾಜೇಶ್ ಬನ್ನೂರು ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಭೆಯಲ್ಲಿ ವಿವಿಧ ಸಮಿತಿಯ ಜವಾಬ್ದಾರಿಗಳನ್ನು ನೀಡಲಾಯಿತು. ಶೋಭಾಯಾತ್ರೆಯ ಸಂಚಾಲಕರಾಗಿ ಪದ್ಮಶ್ರೀ ಸೋಲಾರ್‌ನ ಸೀತಾರಾಮ ರೈ ಕೆದಂಬಾಡಿಗುತ್ತು ರವರನ್ನು ಆಯ್ಕೆ ಮಾಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 15 ತಂಡಗಳು ಹೆಸರು ನೋಂದಾಯಿಸಿದ್ದು, ನವರಾತ್ರಿಯಂದು ಪ್ರತಿದಿನ ಸಂಜೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಆರಂಭಗೊಳ್ಳಲಿದೆ.

ಸಭೆಯಲ್ಲಿ ಉತ್ಸವ ಸಮಿತಿ ಸಂಚಾಲಕ ಪಿ.ಜಿ. ಜಗನ್ನಿವಾಸ್ ರಾವ್, ಮಂದಿರ ಅಧ್ಯಕ್ಷ ಸಾಯಿರಾಮ್ ರಾವ್, ಪ್ರಧಾನ ಕಾರ್ಯದರ್ಶಿ ಜಯಂತ ಉರ್ಲಾಂಡಿ, ಕೋಶಾಧಿಕಾರಿ ತಾರಾನಾಥ್, ಉಪಾಧ್ಯಕ್ಷ ಗೋಪಾಲ್ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

ಪದ್ಮಶ್ರೀ ಸೋಲಾರ್ ಸಿಸ್ಟಮ್ಸ್ ಮಾಲಕರಾದಂತಹ ಸೀತಾರಾಮ್ ರೈ ಕೆದಂಬಾಡಿಗುತ್ತು ರವರು ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ಗುರುತಿಸಿಕೊಂಡಿದ್ದು, ಇತ್ತೀಚಿಗೆ ಮಾಣಿಲ ಶ್ರೀಧಾಮದಲ್ಲಿ ನಡೆದ ಶ್ರೀವರಮಹಾಲಕ್ಷ್ಮೀ ವ್ರತಾಚರಣೆಯ ಬೆಳ್ಳಿಹಬ್ಬದ ಪುತ್ತೂರು ತಾಲೂಕು ಹೊರಕಾಣಿಕೆ ಸಮಿತಿ ಮುಂದಾಳತ್ವವನ್ನು ವಹಿಸಿಕೊಂಡು ಅದ್ದೂರಿಯಾಗಿ ಕಾರ್ಯಕ್ರಮ ನೆರವೇರಿಸಿಕೊಟ್ಟಿದ್ದು, ಅಷ್ಟೇ ಅಲ್ಲದೇ ಬಡವರ ಮನೆ ಬೆಳಗಲು ಸೋಲಾರ್ ವ್ಯವಸ್ಥೆಗಳನ್ನು ಕಲ್ಪಿಸಿಕೊಟ್ಟಿದ್ದು, ಹೀಗೆ ಹತ್ತು ಹಲವು ಕಾರ್ಯಗಳನ್ನು ಉತ್ತಮವಾಗಿ ನಿಭಾಯಿಸುತ್ತಿದ್ದಾರೆ..