Thursday, January 23, 2025
ಸುದ್ದಿ

ಸೆ. 19ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬಕ್ಕೆ ರಜೆ ನೀಡಲು ಸರಕಾರ ಆದೇಶ – ಕಹಳೆ ನ್ಯೂಸ್

ಮಂಗಳೂರು : ಗಣೇಶ ಚತುರ್ಥಿ ಆಚರಣೆಗೆ ಅನುಕೂಲವಾಗುವಂತೆ ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಸರಕಾರಿ ರಜೆಯನ್ನು ಸೆ. 18ರ ಬದಲು ಸೆ.19ರಂದು ರಜೆ ನೀಡಲು ಸರ್ಕಾರ ಆದೇಶ ಹೊರಡಿಸಿದೆ.


ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಹಬ್ಬ ಆಚರಿಸುವ ಕಾರಣ ಅದೇ ದಿನ ಸರ್ಕಾರಿ ರಜೆ ನೀಡಬೇಕು ಎಂದು ಕೂಗು ಕೇಳಿಬಂದಿತ್ತು. ಈ ಬಗ್ಗೆ ಜನಪ್ರತಿನಿಧಿಗಳು ಕೂಡಾ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯ ಕಾರ್ಯದರ್ಶಿ ಮತ್ತು ಜಿಲ್ಲಾಧಿಕಾರಿಯವರಿಗೆ ಸೆ.19ರಂದು ರಜೆ ನೀಡಲು ಪತ್ರ ಮೂಲಕ ತಿಳಿಸಿದ್ದರು. ಇದೀಗ ಸರ್ಕಾರದ ಅಧಿಕೃತ ಆದೇಶ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು