Thursday, January 23, 2025
ಸುದ್ದಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ವತಿಯಿಂದ ಕಟಪಾಡಿ ಗ್ರಾಮ ಪಂಚಾಯತ್ ನಲ್ಲಿ ನಡೆದ ಪೋಷಣ ಅಭಿಯಾನ ಕಾರ್ಯಕ್ರಮ – ಕಹಳೆ ನ್ಯೂಸ್

ಉಡುಪಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ವತಿಯಿಂದ ಕಟಪಾಡಿ ಗ್ರಾಮ ಪಂಚಾಯಿತಿ ನಲ್ಲಿ ಪೋಷಣ ಅಭಿಯಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯಿತಿ ಅಧ್ಯಕ್ಷ ರಾದ ಪ್ರಭಾ ಬಿ. ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಅಂಗನವಾಡಿ ಮೇಲ್ವಿಚಾರಕಿ ಫಿಲೋಮಿನ ಮಾತನಾಡಿದರು. ಪೋಷಣ ಅಭಿಯಾನದ ಉದ್ದೇಶ ಹಾಗೂ ಆರೋಗ್ಯದ ವೃದ್ಧಿಗೆ ಪೋಷಕಾಂಶಗಳ ಅವಶ್ಯಕತೆ, ಆರೋಗ್ಯದ ಬಗ್ಗೆ ಮಾಹಿತಿಯನ್ನು ಸಮುದಾಯ ಆರೋಗ್ಯ ಕಾರ್ಯಕರ್ತರಾದ ಮಮತಾ ಕುಂದರ್ ವಿವರಣೆ ನೀಡಿದರು. ಕಾರ್ಯಕ್ರಮದಲ್ಲಿ ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯ ಕ್ರಮ ಹಾಗೂ ಮಕ್ಕಳಿಗೆ ಅನ್ನ ಪ್ರಾಶನ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಪಂಚಾಯಿತಿ ಕಾರ್ಯದರ್ಶಿ ವಿಮಲಾ ಉಪಾಧ್ಯಕ್ಷ ಸುಗುಣ ಪೂಜಾರಿ, ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಕಾರ್ಯಕರ್ತರು, ನಾಗರೀಕರು ಉಪಸ್ಥಿತರಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ವಾಗತಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು