ಮಂಗಳೂರು : ಹೃದಯಾಘಾತದಿಂದ ಕುಸಿದು ಬಿದ್ದು ಗುಪ್ತಚರ ಇಲಾಖಾ ಸಿಬ್ಬಂದಿ ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು ಕಚೇರಿಯಲ್ಲಿ ಸಾವನ್ನಪ್ಪಿದ್ದಾರೆ.
ನಿನ್ನೆ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಮ ಪಡೆಯುತ್ತಿದ್ದಂತೆ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.
ಇವರು ಸುರತ್ಕಲ್ ಹಾಗೂ ಪಣಂಬೂರು ಪೊಲೀಸ್ ಠಾಣೆಯ ಸಿಬ್ಬಂದಿಯಾಗಿ ಕರ್ತ್ಯವ್ಯ ನಿರ್ವಹಿಸಿದ್ದರು.