Sunday, November 24, 2024
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಗೂಂಡಾ ಕಾಯ್ದೆಯಡಿ ಸರ್ಕಾರ ಅಂದರ್ ಮಾಡಿದ್ದ ಪುನೀತ್ ಕೆರೆಹಳ್ಳಿ‌ ಬಾಹರ್..!! ಕೈ ಸರಕಾರದ ನಡೆಯನ್ನು ‌ನ್ಯಾಯಾಲಯದಲ್ಲಿ ಪ್ರಶ್ನಿಸಿ, ನ್ಯಾಯ ಎತ್ತಿಹಿಡಿದ ಹೈಕೋರ್ಟ್ ಹಿರಿಯ ನ್ಯಾಯವಾದಿ ಅರುಣ್‌ ಶ್ಯಾಮ್..!! – ಕಹಳೆ ನ್ಯೂಸ್

ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ‌ ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲಾಗಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆರೆಹಳ್ಳಿಯ ಪುನೀತ್, ನಗರದ ಜೆ.ಪಿ.ನಗರ 7ನೇ ಹಂತದಲ್ಲಿ ವಾಸವಿದ್ದ.

ಜಾಹೀರಾತು
ಜಾಹೀರಾತು
ಜಾಹೀರಾತು

ಪುನೀತ್ ವಿರುದ್ಧ ರಾಜ್ಯದ 11 ಠಾಣೆಗಳಲ್ಲಿ‌ ಎಫ್‌ಐಆರ್ ದಾಖಲಾಗಿತ್ತು. ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು. ಅಪರಾಧ ಪ್ರಕರಣಗಳಲ್ಲಿ‌ ಪದೇ ಪದೇ ಭಾಗಿಯಾಗುತ್ತಿರುವುದರಿಂದ ಪುನೀತ್‌ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಪುನೀತ್ ಬಂಧಿಸುವಂತೆ ಕಮಿಷನರ್ ಆದೇಶ ಹೊರಡಿಸಿದ್ದರು. ನಂತರ, ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಧನ ಆದೇಶವನ್ನು ಪುನೀತ್ ಪ್ರಶ್ನಿಸಿದ್ದರು. ಇದರ ವಿಚಾರಣೆಗಾಗಿ ಸರ್ಕಾದ ಸಲಹಾ ಸಮಿತಿ ರಚಿಸಿತ್ತು.

ವಿಚಾರಣೆ ನಡೆಸಿದ್ದ ಸಮಿತಿ, ‘ಬಂಧಿಯನ್ನು ಬಂಧನದಲ್ಲಿಡಲು ಸಾಕಷ್ಟಿದೆ ಕಾರಣಗಳಿಲ್ಲ’ ಎಂದು ಅಭಿಪ್ರಾಯಪಟ್ಟು ವರದಿ ನೀಡಿದೆ.

ವರದಿಯನ್ವಯ ಆದೇಶ ಹೊರಡಿಸಿರುವ ಸರ್ಕಾರ, ಕಮಿಷನರ್ ಆದೇಶವನ್ನು ರದ್ದುಪಡಿಸಿದೆ. ಪುನೀತ್ ಬಂಧನಮುಕ್ತಗೊಳಿಸುವಂತೆ ಸೂಚಿಸಿದೆ. ಇದರ ಬೆನ್ನಲ್ಲೇ ಪುನೀತ್‌ನನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಗೂಂಡಾ ಕಾಯ್ದೆಯಡಿ ದಾಖಲಾದ ಪ್ರಕರಣವನ್ನು ರದ್ದುಪಡಿಸಿದ ಮೊದಲ ಪ್ರಕರಣ ಇದಾಗಿದ್ದು, ಖ್ಯಾತ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ಪುನೀತ್ ಪರ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.‌ ಗೂಂಡಾ ಕಾಯ್ದೆಯಡಿ ಪುನೀತ್ ಬಂಧಿಸಿದ ಸರ್ಕಾರಕ್ಕೆ ನ್ಯಾಯಾಲಯ ಛೀಮಾರಿ‌ ಹಾಕಿದ್ದು, ಸದ್ಯ ಪುನೀತ್ ಗೆ ಬಿಡುಗಡೆ ಭಾಗ್ಯ ಲಭಿಸಿದೆ.