Wednesday, January 22, 2025
ಸುದ್ದಿ

ಪರ್ಯಾಯ ಸ್ವಾಗತ ಸಮಿತಿ ಕಾರ್ಯಾಲಯ ಉದ್ಘಾಟನೆ ಹಾಗೂ ಲಾಂಛನ ಬಿಡುಗಡೆ ಕಾರ್ಯಕ್ರಮ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಶ್ರೀ ಪುತ್ತಿಗೆ ಮಠದ ಪರಮ ಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಸ್ವಶಿಷ್ಯ ಪರಮ ಪೂಜ್ಯ ಶ್ರೀ ಶ್ರೀ ಸುಶ್ರೀಂದ್ರತೀರ್ಥ ಶ್ರೀ ಪಾದರೊಡಗೂಡಿ ನಡೆಸಲಿರುವ ಚತುರ್ಥ ಶ್ರೀಕೃಷ್ಣ ಪೂಜಾ ಪರ್ಯಾಯದ ಅಂಗವಾಗಿ ಇಂದು ಆಯೋಜಿಸಲಾದ “ಪರ್ಯಾಯ ಸ್ವಾಗತ ಸಮಿತಿ ಕಾರ್ಯಾಲಯ ಉದ್ಘಾಟನೆ ಹಾಗೂ ಲಾಂಛನ ಬಿಡುಗಡೆ” ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಪರ್ಯಾಯ ಸ್ವಾಗತ ಸಮಿತಿಯ ಕಾರ್ಯಾಲಯನವನ್ನು ಉದ್ಘಾಟಿಸಿ ಪರ್ಯಾಯದ ಲಾಂಛನವನ್ನು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಪುತ್ತಿಗೆ ಪರ್ಯಾಯ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷರು, ನಿಕಟಪೂರ್ವ ಶಾಸಕರಾದ ರಘುಪತಿ ಭಟ್, ಸ್ವಾಗತ ಸಮಿತಿ ಅಧ್ಯಕ್ಷರಾದ ಹೆಚ್. ಎಸ್ ಬಲ್ಲಾಲ್, ಕಾರ್ಯದರ್ಶಿಗಳಾದ ದೇವಿಪ್ರಸಾದ್ ಶೆಟ್ಟಿ ಬೆಳಪು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.