ದೆಹಲಿ: ನೋಯ್ಡಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಇಷಾ ಬೆಹಲ್ ಅವರು ಒಂದು ದಿನದ ಮಟ್ಟಿಗೆ ಭಾರತದಲ್ಲಿನ ಬ್ರಿಟಿಷ್ ಹೈಕಮಿಷನರ್ ಆಗುವ ಅತ್ಯಪೂರ್ವ ಸಾಧನೆಯನ್ನು ಮಾಡಿ ದೇಶದ ಜನತೆಯ ಗಮನವನ್ನು ಸೆಳೆದಿದ್ದಾರೆ.
ನೋಯ್ಡಾ ವಿವಿಯಲ್ಲಿ ಪಾಲಿಟಿಕಲ್ ಸಯನ್ಸ್ ವಿದ್ಯಾರ್ಥಿಯಾಗಿರುವ ಇಷಾ ಮೊನ್ನೆ ಭಾನುವಾರ 24 ತಾಸುಗಳ ಮಟ್ಟಿಗೆ ಭಾರತದಲ್ಲಿನ ಬ್ರಿಟಿಷ್ ಹೈಕಮಿಷನರ್ ಆದರು.
ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯ ಅಂಗವಾಗಿ ಬ್ರಿಟಿಷ್ ಹೈಕಮಿಷನರ್ ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ಈಕೆ ಗೆದ್ದು ಒಂದು ದಿನದ ಮಟ್ಟಿಗೆ ಬ್ರಿಟಿಷ್ ಹೈಕಮಿಷನರ್ ಆಗಿ ಆಯ್ಕೆ ಗೊಂಡರು.