Friday, September 20, 2024
ಸುದ್ದಿ

ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿ ಧರಣಿ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನ ಪಂಪ್‌ವೆಲ್, ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಲು ಮತ್ತು ಹೆದ್ದಾರಿ ಅವ್ಯವಸ್ಥೆಯನ್ನು ಸರಿಪಡಿಸಲು ಹಾಗೂ ಸರ್ವಿಸ್ ರಸ್ತೆಗಳ ಮತ್ತು ನಂತೂರು ಮೇಲ್ಸೇತುವೆ ನಿರ್ಮಿಸಲು ಒತ್ತಾಯಿಸಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಪಂಪ್‌ವೆಲ್ ಮೇಲ್ಸೇತುವೆ ಹೋರಾಟ ಸಮಿತಿಯ ನೇತೃತ್ವದಲ್ಲಿ ಪಂಪ್‌ವೆಲ್ ಮೇಲ್ಸೇತುವೆ ಬಳಿ ಧರಣಿ ನಡೆಯಿತು.

ಮಂಗಳೂರಿನ ಹೃದಯಭಾಗವಾದ ಪಂಪುವೆಲ್‌ನಲ್ಲಿ ಈ ಹಿಂದೆ ಇದ್ದ ಸರ್ಕಲ್ ಭಾರೀ ಹೆಸರುವಾಸಿಯಾಗಿತ್ತು. ಹೊರರಾಜ್ಯ, ಜಿಲ್ಲೆಗಳಿಂದ ಬರುವಂತಹ ಪ್ರಯಾಣಿಕರಿಗೆ ಪಂಪುವೆಲ್ ಸರ್ಕಲ್ ಗುರುತಿನ ಕೇಂದ್ರವಾಗಿತ್ತು. ಇಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಮೇಲ್ಸೇತುವೆ ಕಾಮಗಾರಿ ಆರಂಭಗೊಂಡು 8 ವರ್ಷಗಳು ಕಳೆದಿದ್ದರೂ ಕಾಮಗಾರಿ ಪೂರ್ಣಗೊಂಡಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಹೆದ್ದಾರಿ ಪ್ರಾಧಿಕಾರದ ಬೇಜವಾಬ್ದಾರಿತನ, ಗುತ್ತಿಗೆ ಕಂಪೆನಿಗಳ ಕಳಪೆ ನಿರ್ವಹಣೆ, ಅ ಕಾಮಗಾರಿ, ಜನಪ್ರತಿನಿಧಿಗಳ ನಿರ್ಲಕ್ಷದಿಂದ ಮೇಲ್ಸೇತುವೆ ಕಾಮಗಾರಿ ನನೆಗುದಿಗೆ ಬಿದ್ದಿದೆ. ಸರ್ವಿಸ್ ರಸ್ತೆಗಳಿಲ್ಲದೆ ವಾಹನಗಳು ಹಾಗೂ ಪ್ರಯಾಣಿಕರು ಪರದಾಡುವಂತಾಗಿದೆ.

ಜಾಹೀರಾತು

ಇಂತಹ ಭಾರೀ ಸಮಸ್ಯೆಗಳಿಂದಾಗಿ ಪಂಪುವೆಲ್‌ನಲ್ಲಿ ಈಗಾಗಲೇ ಅನೇಕ ಜೀವಗಳು ಹಾನಿಯಾಗಿದೆ. ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ಕಳೆದ 8 ವರ್ಷಗಳ ಅವಧಿಯಲ್ಲಿ ಹಲವು ಮಂದಿ ವಾಹನ ಸವಾರರು ಜೀವವನ್ನು ಕಳೆದುಕೊಂಡಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.