Monday, January 20, 2025
ಸುದ್ದಿ

ಗ್ಯಾಸ್ ಪೈಪ್ ಸ್ಫೋಟ: ಆರು ಮಂದಿ ಸ್ಥಳದಲ್ಲೇ ಸಾವು – ಕಹಳೆ ನ್ಯೂಸ್

ರಾಯ್ ಪುರ: ಛತ್ತೀಸ್ ಗಡದ ದುರ್ಗಾ ಜಿಲ್ಲೆಯ ಭಿಲಾಯಿ ಸ್ಟೀಲ್ ಪ್ಲಾಂಡ್ ನಲ್ಲಿ ನಡೆದ ಗ್ಯಾಸ್ ಪೈಪ್ ಸ್ಪೋಟದಲ್ಲಿ ಆರು ಮಂದಿ ಮೃತಪಟ್ಟು, 14 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.

ಕೋಕ್ ಓವನ್ ಸೆಕ್ಷನ್ ನ ಪ್ಲಾಂಡ್ ಸಮೀಪವಿರುವಂತಹ ಪೈಪ್ ಲೈನ್ ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಫೋಟದಿಂದಾಗಿ ಗಂಭೀರವಾಗಿ ಗಾಯಗೊಂಡರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದರಲ್ಲಿ 13 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

2014ರಲ್ಲಿ ಇದೇ ಪ್ಲಾಂಟ್ ನಲ್ಲಿ ಗ್ಯಾಸ್ ಸೋರಿಕೆಯಿಂದಾಗಿ ಆರು ಮಂದಿ ಮೃತಪಟ್ಟಿದ್ದರು. ಇದರಲ್ಲಿ ಇಬ್ಬರು ಹಿರಿಯ ಅಧಿಕಾರಿಗಳು ಸೇರಿದ್ದರು. 50 ಮಂದಿ ಘಟನೆಯಲ್ಲಿ ಗಾಯಗೊಂಡಿದ್ದರು.