Recent Posts

Sunday, January 19, 2025
ಸುದ್ದಿ

ಕಸಾಯಿಖಾನೆ ವಿವಾದ: ಸಚಿವ ಯುಟಿ ಖಾದರ್ ಪರ ನಿಂತ ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ – ಕಹಳೆ ನ್ಯೂಸ್

ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯಡಿ ಕುದ್ರೋಳಿ ಕಸಾಯಿಖಾನೆ ಅಭಿವೃದ್ಧಿ ಸೇರ್ಪಡೆ ವಿಚಾರವೂ ವಿವಾದಗೊಳ್ಳುತ್ತಿರುವ ಮಧ್ಯೆಯೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್ ಪರ ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ನಿಂತಿದೆ.

ನಗರದ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಿದ ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞಿ ಕಸಾಯಿಖಾನೆಯ ವಿಚಾರದಲ್ಲಿ ಸಚಿವ ಖಾದರ್ ಸಲಹೆ ನಷ್ಟೇ ನೀಡಿದ್ದಾರೆ ಅವರು ಏಕಪಕ್ಷೀಯವಾಗಿ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ . ಕಸಾಯಿಖಾನೆಯ ಅಭಿವೃದ್ಧಿಗೆ ಹದಿನೈದು ಕೋಟಿ ರುಪಾಯಿ ಬಿಡುಗಡೆಯೂ ಆಗಿಲ್ಲ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಬಳಸಿ ಎಂದು ಅಧಿಕಾರಿಗಳ ಜನಪ್ರತಿನಿಧಿಗಳ ಮಟ್ಟದಲ್ಲಿ ನಡೆದ ಸಭೆಯಲ್ಲಿ ಸಲಹೆ ಮಾತ್ರ ನೀಡಿದ್ದಾರೆ .ಈ ಸಭೆಯಲ್ಲಿ ಬಿಜೆಪಿಯ ಜನಪ್ರತಿನಿಧಿಗಳು ಇದ್ದರೂ ಆವಾಗ ಮೌನ ತಾಳಿದ್ದ ಬಿಜೆಪಿಗರು ಇದೀಗ ಚುನಾವಣೆಯ ದೃಷ್ಟಿಯಲ್ಲಿ ಖಾದರ್ ವಿರುದ್ಧ ಆರೋಪ ಮಾಡುವುದು ಸರಿಯಲ್ಲ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಗೇ ರಾಜ್ಯದಲ್ಲಿ ಜೆಡಿಎಸ್ ಕಾಂಗ್ರೆಸ್ ಸರಕಾರ ಉತ್ತಮ ಆಡಳಿತ ನೀಡುತ್ತಿದೆ ಜಿಲ್ಲಾ ಉಸ್ತುವಾರಿ ಸಚಿವ ಖಾದರ್ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ತನ್ನ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ .ಯಾವುದೇ ಪಕ್ಷಪಾತ ಮಾಡುವುದಿಲ್ಲ ,ಜಿಲ್ಲೆಯ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ ಅಲ್ಲದೆ ಕಸಾಯಿಖಾನೆಯ ನೈರ್ಮಲ್ಯದ ದೃಷ್ಟಿಯಿಂದ ಅಭಿವೃದ್ಧಿಪಡಿಸುವ ಯೋಜನೆಯಲ್ಲಿ ಯಾವುದೇ ತಪ್ಪಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊಣಾಜೆ ಸಮೀಪದ ಪಜೀರಿನ ಕಾರ್ತಿಕ್ ರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಬೆಂಕಿ ಹಚ್ಚುವುದಾಗಿ ಹೇಳಿಕೊಂಡಿದ್ದ ಸಂಸದ ನಳಿನ್ ಇದೀಗ ಕಸಾಯಿಖಾನೆ ಮತ್ತು ಖಾದರ್ ವಿಚಾರವನ್ನು ಮುಂದಿಟ್ಟು ಜನರ ದಾರಿ ತಪ್ಪಿಸುತ್ತಿದ್ದಾರೆ ಭಾವನಾತ್ಮಕ ವಿಭಜಿಸುವ ಪ್ರಯತ್ನ ಮಾಡುತ್ತಿದ್ದಾರೆ ಬಿಜೆಪಿ ಪ್ರಚೋದನಕಾರಿ ಮಾತುಗಳ ಮೂಲಕ ಜಿಲ್ಲೆಯ ಸ್ವಾಸ್ಥ್ಯ ಕದಡುವ ಬದಲು ಜಿಲ್ಲೆಯ ಅಭಿವೃದ್ಧಿಗೆ ಸೂಕ್ತ ಸಲಹೆಗಳನ್ನು ನೀಡಲಿ ಎಂದು ಮಹಮ್ಮದ್ ಕುಂಜಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಸುದ್ದಿ ಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ವಸಂತ ಪೂಜಾರಿ ಎಂ.ಕೆ ಖಾದರ್ ಮತ್ತಿತರರು ಉಪಸ್ಥಿತರಿದ್ದರು.