Wednesday, January 22, 2025
ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಕೆ.ಎನ್.ಆರ್.ಸಿ. ಕಂಪೆನಿಯ ಲಾರಿ – ಕಹಳೆ ನ್ಯೂಸ್

ಬಂಟ್ವಾಳ : ಕೆ.ಎನ್.ಆರ್.ಸಿ. ಕಂಪೆನಿಗೆ ಸೇರಿದ ಘನಗಾತ್ರದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಮಾಣಿಯ ಒಳರಸ್ತೆಯೊಂದರಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಇಲ್ಲದೆ ಚಾಲಕ ಪಾರಾಗಿದ್ದಾನೆ. ಬಿಸಿರೋಡು – ಅಡ್ಡಹೊಳೆವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪೆನಿಗೆ ಸೇರಿದ ಲಾರಿ ಇದಾಗಿದೆ. ಇವರ ಲಾರಿ ಸಹಿತ ಇತರ ವಾಹನಗಳು ಅಗಾಗ ಅಪಘಾತಕ್ಕೀಡಾಗುತ್ತಿದೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

ಇತ್ತೀಚಿಗೆ ಸಂಸದರ ಜೊತೆಗೆ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಕಲ್ಲಡ್ಕದ ವರ್ತಕರು ಹಾಗೂ ಸಾರ್ವಜನಿಕರು ನಡೆಸಿದ ಸಭೆಯಲ್ಲಿ ಕೂಡ ಈ ವಿಚಾರ ಪ್ರಸ್ತಾಪವಾಗಿತ್ತು.

ಕಂಪೆನಿ ವಾಹನಗಳು ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡುವುದರ ಬಗ್ಗೆ ದೂರು ನೀಡಿದ ಅವರು ಈ ಬಗ್ಗೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದರು.ಆದರೆ ಅ ಬಳಿಕವೂ ಮೆಲ್ಕಾರ್ ಸಹಿತ ಅನೇಕ ಕಡೆಗಳಲ್ಲಿ ವಾಹನ ಅಪಘಾತ ಸಂಭವಿಸಿದೆ. ಹಾಗಾಗಿ ಕಂಪೆನಿಯ ಪ್ರಮುಖರು ಈ ಬಗ್ಗೆ ಹೆಚ್ಚು ಗಮನಹರಿಸುವಂತಾಗಬೇಕು ಎಂದು ಸಾರ್ವಜನಿಕರು ಆಗ್ರಹ ವ್ಯಕ್ತಪಡಿಸಿದ್ದಾರೆ.