ಪ್ರಧಾನಿ ನರೇಂದ್ರ ಮೋದಿಯವರು ಗಾಂಧಿ ಜಯಂತಿಯ ಪೂರ್ವ ದಿನವಾದ ಇಂದು ಕಸ ಗುಡಿಸಿ ಸ್ವಚ್ಛಗೊಳಿಸಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಈ ಮೂಲಕ ಗಾಂಧಿಜಿಯವರಿಗೆ ಸ್ವಚ್ಛಾಂಜಲಿ ಅರ್ಪಿಸಿದ್ದಾರೆ.
ಈ ವೇಳೆ ಮೋದಿಯವರು ಫಿಟ್ ನೆಸ್ ಕ್ಷೇತ್ರದಲ್ಲಿ ಹೆಸರು ಮಾಡಿರುವ ಅಂಕಿತ್ ಬೈಯನ್ ಪುರಿಯಾ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ. ಅಭಿಯಾನಕ್ಕೆ ಮೋದಿ ಹಾಗೂ ಅಂಕಿತ್ ಇಬ್ಬರು ಕಸ ಗುಡಿಸುವ ಮೂಲಕ ವಿಶೇಷವಾಗಿ ಚಾಲನೆ ನೀಡಿದ್ದಾರೆ. ಬಳಿಕ ಮೋದಿಯವರು ಫಿಟ್ ನೆಸ್ ಮತ್ತು ಆರೋಗ್ಯದ ವಿಚಾರವಾಗಿ ಮಾತುಕತೆ ನಡೆಸಿದ್ದಾರೆ. ಈ ವೀಡಿಯೋವನ್ನು ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.
ರಾಷ್ಟ್ರದ ಸ್ವಚ್ಛತೆಗೆ ಆದ್ಯತೆ ನೀಡಿ ಈ ಅಭಿಯಾನಕ್ಕೆ ಚಾಲನೆ ನೀಡಿದ್ದೇವೆ. ಸ್ವಚ್ಛತೆಯ ಹೊರತಾಗಿ ಫಿಟ್ ನೆಸ್ ಮತ್ತು ಆರೋಗ್ಯದ ಬಗ್ಗೆಯೂ ಚರ್ಚಿಸಿದ್ದೇವೆ. ಈ ಮೂಲಕ ಸ್ವಚ್ಛ ಮತ್ತು ಸ್ವಸ್ತ್ ಭಾರತ ಎಂಬ ಪರಿಕಲ್ಪನೆಯನ್ನು ಬಿತ್ತಲಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ.