Recent Posts

Sunday, January 19, 2025
ಕ್ರೈಮ್ದಕ್ಷಿಣ ಕನ್ನಡಸಂತಾಪಸುದ್ದಿ

ಮಂಗಳೂರಿನ ಮಹೇಶ್‌ ಮೋಟರ್ರ್ಸ್‌ ನ ಮಾಲಕ ಪ್ರಕಾಶ್‌ ಫ್ಲ್ಯಾಟ್‌ನಲ್ಲಿ ಆತ್ಮಹತ್ಯೆ ; ಆ.2 ರಂದು ಸಂಜೆ ಅಂತ್ಯಕ್ರಿಯೆ – ಆತ್ಮಹತ್ಯೆಗೆ ಕಾರಣ ನಿಗೂಢ..!! – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನ ಮಹೇಶ್‌ ಮೋಟರ್ರ್ಸ್‌ ನ ಮಾಲಕ ಪ್ರಕಾಶ್‌ ಶೇಖ(48) ಅವರು ಕದ್ರಿಕಂಬಳದ ತಮ್ಮ ಫ್ಲ್ಯಾಟ್‌ನಲ್ಲಿ ರವಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಖ್ಯಾತ ಸಾರಿಗೆ ಉದ್ಯಮಿ, ಬಸ್‌ ಮಾಲಕರ ಸಂಘದ ಮಾಜಿ ಅಧ್ಯಕ್ಷ ಜಯರಾಮ ಶೇಖ ಅವರ ಪುತ್ರರಾಗಿರುವ ಪ್ರಕಾಶ್‌ ಅವರು, ಉದ್ಯಮವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಫ್ಲ್ಯಾಟ್‌ನಲ್ಲಿ ಪತ್ನಿ ಮತ್ತು ಪುತ್ರಿಯೊಂದಿಗೆ ವಾಸವಾಗಿದ್ದ ಅವರು ರವಿವಾರ ಬೆಳಗ್ಗೆ ತನ್ನ ರೂಮ್‌ಗೆ ಹೋಗಿದ್ದರು. ಮಧ್ಯಾಹ್ನ ಊಟಕ್ಕೂ ಹೊರಗೆ ಬಂದಿರಲಿಲ್ಲ. ಪತ್ನಿ ಕರೆಯಲು ಹೋದಾಗ ಬಾಗಿಲು ತೆರೆಯಲಿಲ್ಲ. ಇದರಿಂದ ಸಂಶಯಗೊಂಡು ಬಾಗಿಲು ಒಡೆದು ನೋಡಿದಾಗ ಪ್ರಕಾಶ್‌ ಫ್ಯಾನ್‌ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಕಾಶ್‌ ಶೇಖ ಅವರ ನಿಧನಕ್ಕೆ ಸಿಟಿಬಸ್‌ ಮಾಲಕರ ಸಂಘದ ಅಧ್ಯಕ್ಷ ಅಜೀಜ್‌ ಪರ್ತಿಪಾಡಿ, ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್‌, ಮಾಜಿ ಅಧ್ಯಕ್ಷರಾದ ಜಯಶೀಲ ಅಡ್ಯಂತಾಯ, ದಿಲ್‌ರಾಜ್‌ ಆಳ್ವ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಅಂತ್ಯಕ್ರಿಯೆ ಅ.2ರಂದು ಸಂಜೆ 4ಕ್ಕೆ ಕುಲಶೇಖರದಲ್ಲಿರುವ ಅವರ ಮನೆಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.