Recent Posts

Monday, January 20, 2025
ಸುದ್ದಿ

ಕುಮಾರ ಪರ್ವತಕ್ಕೆ ಚಾರಣ ಹೋಗಲು ಮಳೆ ಹಿನ್ನೆಲೆ ನಿಷೇಧ ಆದೇಶ ಹೊರಡಿಸಿದ ಅರಣ್ಯ ಇಲಾಖೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರ ಪರ್ವತಕ್ಕೆ ಚಾರಣ ಹೋಗಲು ಅ. 3ರಿಂದ ನಿಷೇಧ ವಿಧಿಸಲಾಗಿದೆ ಎಂದು ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಳೆಯ ಪ್ರಮಾಣ ಹೆಚ್ಚಿರುವ ಕಾರಣ ಹಾಗೂ ಹವಾಮಾನ ಇಲಾಖೆಯು ನಿರಂತರವಾಗಿ ಜಿಲ್ಲೆಯಲ್ಲಿ ಆರೆಂಜ್ ಎಲರ್ಟ್ ಘೋಷಿಸಿದ ಕಾರಣ ಚಾರಣಿಗರ ಹಿತದೃಷ್ಟಿಯಿಂದ ಅ.3ರಿಂದ ಮುಂದಿನ ಆದೇಶದ ತನಕ ಕುಮಾರಪರ್ವತ ಚಾರಣ ನಿಷೇಧಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಭಾರೀ ಮಳೆಯಿಂದ ಕಡಿದಾದ ಬೆಟ್ಟವನ್ನು ಏರಲು ಚಾರಣಿಗರಿಗೆ ಅತಿಯಾದ ಸಂಕಷ್ಟ ಮತ್ತು ಕಷ್ಟವಾಗುವ ಕಾರಣ ಇಲಾಖೆಯ ಈ ಆದೇಶಕ್ಕೆ ಪ್ರವಾಸಿಗರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಇಲಾಖೆ ವಿನಂತಿಸಿದೆ.