Monday, January 20, 2025
ಸುದ್ದಿ

NMC ಬಿ.ಸಿ.ಎ ವಿಭಾಗದ ನೂತನ ಘಟಕ ಟೆಕ್ ಕೆಡೆಟ್ ಮತ್ತು ವಾರ್ಷಿಕ ಕಾರ್ಯ ಚಟುವಟಿಕೆಗಳಿಗೆ ಚಾಲನೆ – ಕಹಳೆ ನ್ಯೂಸ್

ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ನೂತನವಾಗಿ ಆರಂಭವಾದ ಬಿ.ಸಿ.ಎ ಕೋರ್ಸ್ ನ ಘಟಕ ಟೆಕ್ ಕೆಡೆಟ್ ಮತ್ತು ವಾರ್ಷಿಕ ಕಾರ್ಯ ಚಟುವಟಿಕೆಗಳಿಗೆ ಸೆಪ್ಟೆಂಬರ್ 30ರ ಶನಿವಾರದಂದು ಕಾಲೇಜು ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಿ.ಸಿ.ಎ ಕೋರ್ಸ್ ನ ನೂತನ ಘಟಕಕ್ಕೆ “ಟೆಕ್ ಕೆಡೆಟ್” ನಾಮಾಂಕಿತ ನೀಡಿದ ವೀಡಿಯೋ ಕ್ಲಿಕ್ ಮಾಡುವುದರ ಮೂಲಕ ಕೋರ್ಸಿನ ವಾರ್ಷಿಕ ಕಾರ್ಯಚಟುವಟಿಕೆಗಳಿಗೆ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕಾರ್ಯದರ್ಶಿ ಅಕ್ಷಯ ಕೆ.ಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಇವರು, ಹೊಸ ತಂತ್ರಜ್ಞಾನದ ಮೂಲಕ ನೂತನವಾಗಿ ಪ್ರಾರಂಭವಾದ ಬಿ.ಸಿ.ಎ ಕೋರ್ಸ್ ನ್ನು ವಿದ್ಯಾರ್ಥಿಗಳು ಪ್ರಾಯೋಗಿಕ ವಾಗಿ ಬಳಸಿಕೊಳ್ಳಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರೊ. ರವಿಶಂಕರ್ ಎಂ.ಎನ್ ಮಾತನಾಡಿ, ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಬಿಸಿಎ ಕೋರ್ಸ್ ನ ಮೂಲಕ ತಂತ್ರಜ್ಞಾನವನ್ನು ಪ್ರಯೋಗಿಕವಾಗಿ ಬಳಸಿಕೊಂಡು ಹೊಸತನವನ್ನು ವಿದ್ಯಾರ್ಥಿಗಳು ಕಾಣಬೇಕಾಗಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ರುದ್ರ ಕುಮಾರ್ ಎಂ.ಎನ್ ಅಧ್ಯಕ್ಷತೆ ವಹಿಸಿದ ವೇದಿಕೆಯಲ್ಲಿ ಕಾಲೇಜಿನ ಶೈಕ್ಷಣಿಕ ಸಲಹೆಗಾರ ಪ್ರೊ. ಬಾಲಚಂದ್ರ ಗೌಡ ಎಂ, ಆಡಳಿತ ಮಂಡಳಿಯ ಸಲಹೆಗಾರ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ ಪೇರಾಲು, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ರತ್ನಾವತಿ ಡಿ, ಐ.ಕ್ಯೂ.ಎ.ಸಿ ಘಟಕದ ಸಮನ್ವಯಾಧಿಕಾರಿ ಡಾ. ಮಮತ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಿ.ಸಿ.ಎ ವಿಭಾಗದ ಮುಖ್ಯಸ್ಥೆ ಹಾಗೂ ಸಂಯೋಜಕಿ ಭವ್ಯ ಮನು ಪೆರುಮುಂಡ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗ ಮುಖ್ಯಸ್ಥೆ ದೀಕ್ಷಾ ವಂದಿಸಿದರು. ಬಳಿಕ ಬಿಸಿಎ ವಿಭಾಗಕ್ಕೆ ನೂತನ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳನ್ನು ಸ್ವಾಗತಿಸಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಬೋಧಕೇತರ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.