ಬಿಎಂಎಸ್ ರಿಕ್ಷಾ ಚಾಲಕ ಮತ್ತು ಮಾಲಕ ಸಂಘ ರಾಯಿ ಇದರ ನೂತನ ರಿಕ್ಷಾ ನಿಲ್ದಾಣವನ್ನು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯಕ್ ಉಳಿಪಾಡಿ ಇವರು ಉದ್ಘಾಟಿಸಿದರು.
ರಾಯಿ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ರಾಯಿಬೆಟ್ಟು ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನೆರವೇರಿತು.
ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಬಿ ಎಂ ಎಸ್ ಸಂಘಟನಾ ಕಾರ್ಯದರ್ಶಿ ವಸಂತ್ ಕುಮಾರ್ ಮಣಿ ಹಳ್ಳ ಜಿಲ್ಲಾ ಮೋಟರ್ ಅಂಡ್ ಜನರಲ್ ಮದ್ದೂರ್ ಸಂಘ ದ ಉಪಾಧ್ಯಕ್ಷ ನಾರಾಯಣ ಪೂಜಾರಿ ಬಂಟ್ವಾಳ ಬಿ ಎಂ ಎಸ್ ರಿಕ್ಷಾ ಚಾಲಕ ಮತ್ತು ಮಾಲಕರ ಅಧ್ಯಕ್ಷ ವಿಶ್ವನಾಥ್ ಚಂಡ್ತಿಮಾರ್ ಹಾಗೂ ರಾಯಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗುಣವತಿರಾಜೇಶ್ , ಊರಿನ ಗಣ್ಯ ವ್ಯಕ್ತಿಗಳು ಮತ್ತು ರಾಯಿ ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷರು ಸರ್ವ ಸದಸ್ಯರು ಉಪಸ್ಥಿತರಿದ್ದರು.