ಉಡುಪಿ ಶ್ರೀ ಕೃಷ್ಣನ ರಾಜಂಗಣ ದಲ್ಲಿ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಜನಜಾಗೃತಿ ಜಾಥಾ ಮತ್ತು ಸಮಾವೇಶ – ಕಹಳೆ ನ್ಯೂಸ್
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.) ಉಡುಪಿ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ.), ಬೆಳ್ತಂಗಡಿ ಜಿಲ್ಲಾ ಜನಜಾಗೃತಿ ವೇದಿಕೆ ಉಡುಪಿ ಮತ್ತು ತಾಲೂಕು ಜನಜಾಗೃತಿ ವೇದಿಕೆ ಉಡುಪಿ, ಕಾಪು, ಬ್ರಹ್ಮಾವರ ಹಾಗೂ ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಕೃಷ್ಣಾಪುರ ಮಠ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ಇಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಲಾದ “ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಆಯೋಜಿಸಲಾದ ಜನಜಾಗೃತಿ ಜಾಥಾ ಮತ್ತು ಸಮಾವೇಶ 2023” ಕಾರ್ಯಕ್ರಮ ವನ್ನು ಪರ್ಯಾಯ ಕೃಷ್ಣ ಪುರ ಮಠದ ದಿವಾನರಾದ ಶ್ರೀ ವರ ದ ರಾಜ್ ಭಟ್ ದೀಪ ಬೆಳಗಿಸಿದರು,
ಈ ಸಂದರ್ಭದಲ್ಲಿ ಉಡುಪಿ ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಸತ್ಯಾನಂದ ನಾಯಕ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ದುಶ್ಚ ಟ ಅಂಟು ರೋಗವಲ್ಲ, ಸರಿಯಾದ ಶಿಕ್ಷಣ ಮತ್ತು ಭಕ್ತಿ ಯಿಂದ ಸುಸಂಕೃತ ನಾಗಿ ಬೆಳೆ ಯಲು ಬಾಲ್ಯದಿಂದಲೇ ಮಾರ್ಗದರ್ಶನ ದೊರೆಯಬೇಕು, ದುಶ್ಚಟ ಅಭಿವೃದ್ಧಿ ಮತ್ತು ಅರೋಗ್ಯ ಎರಡನ್ನು ನಾಸಾ ಮಾಡುತ್ತದೆ ಎಂದರು.
ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಕಾಪು ಶಾಸಕರು ಸುರೇಶ್ ಶೆಟ್ಟಿ ಗುರ್ಮೆ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ರಿ. ಉಡುಪಿ ಪ್ರಾದೇಶಿಕ ನಿರ್ದೇಶಕರಾದ ದುಗ್ಗೇಗೌಡ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ನಿಕಟಪೂರ್ವ ರಾಜ್ಯಾಧ್ಯಕ್ಷರಾದ ದೇವದಾಸ್ ಹೆಬ್ಬಾರ್, ಉಡುಪಿ ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ, ಉಡುಪಿ ವಿಭಾಗ ಸೂಕ್ಷ್ಮ ವಿಮಾ ವಿಭಾಗ ಪ್ರಬಂಧಕರಾದ ದಿನೇಶ್ ಪ್ರಭು, ಬ್ರಹ್ಮಾವರ ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ನಗರಸಭಾ ಸದಸ್ಯರಾದ ಮಾನಸ ಸಿ ಪೈ, ಉಡುಪಿ ತಾಲೂಕು ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಶಮಿತ ಪಿ ಶೆಟ್ಟಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ನ ಯೋಜನಾಧಿಕಾರಿಗಳು, ಮೇಲ್ವಿಚಾರಕರು, ಪದಾಧಿಕಾರಿಗಳು ಉಪಸ್ಥಿತರಿದ್ದರು