Friday, January 24, 2025
ಸುದ್ದಿ

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ BPL   ಕಾರ್ಡ್ ತಿದ್ದುಪಡಿಗೆ ಅವಕಾಶ – ಕಹಳೆ ನ್ಯೂಸ್

ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪಡಿತರ ಚೀಟಿದಾರರ ಹೆಸರು ಸೇರ್ಪಡೆ ಸೇರಿದಂತೆ ಅಗತ್ಯ ತಿದ್ದುಪಡಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತೂಂದು ಅವಕಾಶ ನೀಡಿದೆ.


ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಹೆಸರು ಸೇರ್ಪಡೆ, ಪರಿಷ್ಕರಣೆ ಸೇರಿದಂತೆ ಯಾವುದೇ ರೀತಿಯ ತಿದ್ದುಪಡಿಗಳಿದ್ದರೂ ಮಾಡಿಸಿಕೊಳ್ಳಬಹುವುದು.

ಜಾಹೀರಾತು
ಜಾಹೀರಾತು
ಜಾಹೀರಾತು

ಚಾಲ್ತಿಯಲ್ಲಿರುವ ಪಡಿತರ ಚೀಟಿಯಲ್ಲಿನ ಹೆಸರು ರದ್ದುಪಡಿಸುವುದು, ಕುಟುಂಬದ ಹೊಸ ಸದಸ್ಯರ ಹೆಸರು ಸೇರಿಸುವುದು, ಹೆಸರಿನಲ್ಲಿನ ಲೋಪದೋಷಗಳ ತಿದ್ದುಪಡಿ, ವಿಳಾಸ ಬದಲಾವಣೆಯಂತಹ ಪರಿಷ್ಕರಣೆಗೆ ಅವಕಾಶ ಒದಗಿಸಲಾಗಿದೆ.
ಮೊದಲ ಹಂತದಲ್ಲಿ ಅ. 5ರಿಂದ 7ರ ವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು