Wednesday, January 22, 2025
ಸುದ್ದಿ

ಬನ್ಸ್ ರಾಘು ಕೊಲೆ ಪ್ರಕರಣ- ಆರೋಪಿಗಳಿಬ್ಬರು ಪೊಲೀಸರ ವಶಕ್ಕೆ – ಕಹಳೆ ನ್ಯೂಸ್

 

ಉಡುಪಿ : ಕುಂದಾಪುರದ ರಾಘವೇಂದ್ರ ಶೇರುಗಾರ್ ಅಲಿಯಾಸ್ ಬನ್ಸ್ ರಾಘು(42) ಕೊಲೆ ಪ್ರಕರಣಕ್ಕೆ ಸಂಬoಧಿಸಿದoತೆ ಕುಂದಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆoದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು


ರವಿವಾರ ಸಂಜೆ ಕೃತ್ಯ ನಡೆದ ತಕ್ಷಣವೇ ಪೊಲೀಸ್ ಇಲಾಖೆ ಆರೋಪಿ ಬಂಧನಕ್ಕೆ ಕಾರ್ಯಪ್ರವೃತ್ತರಾಗಿದ್ದು ಉಡುಪಿ ಎಸ್ಪಿ ಡಾ.ಅರುಣ್ ಕೆ. ಮೂರು ವಿಶೇಷ ತನಿಖಾ ತಂಡ ರಚಿಸಿದ್ದರು. ಪೊಲೀಸರ ತಂಡಗಳು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದು ಸಿಸಿ ಟಿವಿ ದೃಶ್ಯಾವಳಿ ಸಹಿತ ಅಗತ್ಯ ದಾಖಲೆಗಳನ್ನು ಪರಿಶೀಲಿಸಿದ್ದು ಪ್ರತ್ಯಕ್ಷದರ್ಶಿಗಳಿಂದ ಮಾಹಿತಿ ಕಲೆಹಾಕಿ ಆರೋಪಿಗಳ ಪತ್ತೆಗೆ ಶಿವಮೊಗ್ಗ, ಬೆಂಗಳೂರು ಸಹಿತ ವಿವಿಧ ಕಡೆಗಳಿಗೆ ತನಿಖಾ ತಂಡ ತೆರಳಿತ್ತು.
ಪೊಲೀಸರ ಒಂದು ತಂಡ ಶಿವಮೊಗ್ಗ ಮೂಲದ ಇಬ್ಬರು ಆರೋಪಿಗಳನ್ನು ಗುರುವಾರ ವಶಕ್ಕೆ ಪಡೆದಿದ್ದು ವಿಚಾರಣೆಗೆ ಒಳಪಡಿಸಿದೆ. ಕೊಲೆಗೆ ನಿಖರವಾದ ಕಾರಣ ಏನು ಎಂಬುದು ಇನ್ನಷ್ಟೆ ತಿಳಿದು ಬರಬೇಕಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು