Saturday, November 23, 2024
ಸುದ್ದಿ

ಶಿವಮೊಗ್ಗ : ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪ : ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್

ಶಿವಮೊಗ್ಗ : ಈದ್ ಮಿಲಾದ್ ಗಲಾಟೆಗೆ ಸಂಬoಧಿಸಿದoತೆ ರಾಗಿ ಗುಡ್ಡಕ್ಕೆ, ಕಲ್ಲುತೂರಾಟದಿಂದ ಮನೆಗಳಿಗೆ ಹಾನಿಯಾಗಿರುವ ಸಂತ್ರಸ್ತರ ಮನೆಗಳಿಗೆ ಭೇಟಿ ನೀಡಿದ್ದ ಪುತ್ತಿಲ ಪರಿವಾರ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಅವರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ಸ್ಥಳೀಯ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಶಿವಮೊಗ್ಗದ ರಾಗಿ ಗುಡ್ಡಕ್ಕೆ ಭೇಟಿ ನೀಡಿದ್ದ ಅರುಣ್ ಪುತ್ತಿಲ, ನೊಂದ ಕುಟುಂಬಸ್ಥರಿಗೆ ದೈರ್ಯವನ್ನು ತುಂಬಿ, ಬಳಿಕ ಮಾತನಾಡಿದ್ದ ಅರುಣ್ ಪುತ್ತಿಲ.., ಆಯುಧ ಪೂಜೆಯ ದಿನ ಶಸ್ತ್ರಾಸ್ತ್ರಗಳಿಗೆ ಪೂಜೆ ಮಾಡಿ ಎಂದಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅನೇಕ ರೀತಿಯ ನೋವು, ದಾಳಿ, ಅಪಮಾನದ ನಡುವೆ ಹಿಂದೂ ಸಮಾಜದ ರಕ್ಷಣೆ ಆಗಬೇಕಿದೆ. ಸರ್ಕಾರ ತಲ್ವಾರ್ ಹಿಡಿದು ಮೆರವಣಿಗೆಗೆ ಅವಕಾಶ ಮಾಡಿಕೊಡುತ್ತಾರೆ ಎಂದರೆ ಮಾರಕಾಸ್ತ್ರ ಹಿಡಿದು ಹಿಂದು ಸಮಾಜದ ಮೇಲೆ, ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲು ಸಹಕಾರ ಕೊಡುತ್ತಾರೆ. ನಮ್ಮಲ್ಲೂ ತಲ್ವಾರ್, ಶಸ್ತ್ರಾಸ್ತ್ರ ಇದೆ. ಅಗತ್ಯ ಬಿದ್ದರೆ ಇದೇ ಶಸ್ತ್ರಾಸ್ತ್ರ ಮೂಲಕ ಪ್ರತಿಕ್ರಿಯೆ ಕೊಡಲು ಹಿಂದೂ ಸಮಾಜ ಸಿದ್ಧವಿದೆ. ನವರಾತ್ರಿ ದಿನ ಶಸ್ತ್ರಾಸ್ತ್ರಗಳಿಗೆ ಪೂಜೆ ಮಾಡುತ್ತೇವೆ. ಪ್ರತಿ ಮನೆ ಮನೆಯಲ್ಲಿಯೂ ತಲ್ವಾರ್‌ಗಳಿಗೆ ಪೂಜೆ ಮಾಡಬೇಕು. ಸ್ಕ್ರ‍್ಯೂಡ್ರೈವರ್, ಸ್ಪಾನರ್ ಕೈಬಿಡಿ ತಲ್ವಾರ್‌ಗಳಿಗೆ ಪೂಜೆ ಮಾಡಿ ಎಂದಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

144 ಅಡಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಕೋಮುಗಳ ನಡುವೆ ದ್ವೇಷದ ಭಾವನೆ ಮೂಡುವಂತಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.