Thursday, January 23, 2025
ಸುದ್ದಿ

ನವೆಂಬರ್ 1 ರೊಳಗೆ ಹೆರ್ಗ ಸರಳಬೆಟ್ಟು ವಸತಿ ಸಮುಚ್ಚಯ ಹಸ್ತಾಂತರಕ್ಕೆ ಕ್ರಮಕೈಗೊಳ್ಳಿ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ – ಕಹಳೆ ನ್ಯೂಸ್

ಉಡುಪಿ : ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಭವನದಲ್ಲಿ ಶಾಸಕ ಶ್ರೀ ಯಶ್ ಪಾಲ್ ಸುವರ್ಣ ರವರು ಅಧಿಕಾರಿಗಳ ಸಭೆ ನಡೆಸಿ ನಗರ ಸಭಾ ವ್ಯಾಪ್ತಿಯ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ ತಕ್ಷಣ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಸಭೆಯಲ್ಲಿ ಉಡುಪಿ ನಗರದ ವಾಹನ ದಟ್ಟಣೆ, ಪಾರ್ಕಿಂಗ್ ಸಮಸ್ಯೆ, ಹೆರ್ಗ ಸರಳಬೆಟ್ಟು ವಸತಿ ಸಮುಚ್ಚಯದ ಫಲಾನುಭವಿಗಳಿಗೆ ಮನೆ ಹಸ್ತಾಂತರಕ್ಕೆ ಕ್ರಮ, ನಗರೋತ್ಥಾನ ಯೋಜನೆ ಸಹಿತ ಅಭಿವೃದ್ಧಿ ಬಾಕಿಯಿರುವ ಕಾಮಗಾರಿಗಳು, ದಾರಿ ದೀಪ ಸಮರ್ಪಕ ನಿರ್ವಹಣೆ, ಮಳೆ ಅಭಾವದಿಂದ ಮುಂದಿನ ದಿನಗಳಲ್ಲಿ ಸೃಷ್ಟಿಯಾಗಲಿರುವ ಕುಡಿಯುವ ನೀರು ಸಮಸ್ಯೆಗಳ ಬಗ್ಗೆ ಮೊದಲಾದ ವಿಷಯಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಭೆಯಲ್ಲಿ ಉಡುಪಿ ನಗರಸಭೆ ಪೌರಾಯುಕ್ತರು ಪೊಲೀಸ್ ಇಲಾಖೆಯ ವೃತ್ತ ನಿರೀಕ್ಷಕರು, ಉಡುಪಿ ಸಂಚಾರ ಠಾಣೆ ಉಪ ನಿರೀಕ್ಷಕರು, ನಗರಸಭೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು