Recent Posts

Friday, November 22, 2024
ಸುದ್ದಿ

ಆಹಾರ ಇಲಾಖೆಯಿಂದ ರೇಷನ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್ –ರೇಷನ್ ಕಾರ್ಡ್ ಮಾರ್ಪಾಡು, ತಿದ್ದುಪಡಿಗೆ ಅವಕಾಶ – ಕಹಳೆ ನ್ಯೂಸ್

ಬಿಪಿಎಲ್, ಎಪಿಎಲ್ ಹಾಗೂ ಎಎವೈ ರೇಷನ್ ಕಾರ್ಡ್ ಹೊಂದಿರುವವರಿಗೆ ಆಹಾರ ಇಲಾಖೆ ಗುಡ್ ನ್ಯೂಸ್ ನೀಡಿದೆ.ರಾಜ್ಯಾದ್ಯಂತ ಪಡಿತರ ಚೀಟಿ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಿ ಆದೇಶ ಹೊರಡಿಸಿದ್ದು, ಅಕ್ಟೋಬರ್ 5ರಿಂದ 9 ದಿನಗಳ ಕಾಲ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಕ್ಟೋಬರ್ 13 ರವರೆಗೆ ಪಡಿತರ ಚೀಟಿಗಳನ್ನು ಅಪ್ಡೇಟ್ ಮಾಡಿಕೊಳ್ಳಬಹುದಾಗಿದ್ದು, ಅದರಂತೆ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ, ಕಾರ್ಡ್ಗಳಿಗೆ ಹೊಸ ಹೆಸರು ಸೇರ್ಪಡೆ, ಹೆಸರುಗಳ ಅಕ್ಷರಗಳು, ವಿಳಾಸ ಪರಿಷ್ಕರಣೆ ಸೇರಿದಂತೆ ಯಾವುದೇ ರೀತಿಯ ತಿದ್ದುಪಡಿಗಳಿದ್ದರೂ ಮಾಡಿಸಿಕೊಳ್ಳಬಹುದಾಗಿದೆ. ಹಾಲಿ ಇರುವ ಪಡಿತರ ಚೀಟಿಯಲ್ಲಿನ ಹೆಸರು ರದ್ದುಪಡಿಸುವುದು, ಕುಟುಂಬದ ಹೊಸ ಸದಸ್ಯರ ಹೆಸರು ಸೇರಿಸುವುದಕ್ಕೆ ಅವಕಾಶ ಒದಗಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸಲು ರಾಜ್ಯದ ಎಲ್ಲಾ ಭಾಗದಲ್ಲಿ ಒಮ್ಮೆಲೇ ಅವಕಾಶ ಕಲ್ಪಿಸಲಾಗಿದೆ. ರೇಶನ್ ಕಾರ್ಡ್ ತಿದ್ದುಪಡಿ ಮಾಡುವ ಪ್ರಕ್ರಿಯೆಯನ್ನು ವಿಭಾಗವಾರುಗಳಂತೆ ವಿಂಗಡಿಸಲಾಗಿದ್ದು, ಪ್ರತಿ ವಿಭಾಗಕ್ಕೆ ತಲಾ ಮೂರು ದಿನಗಳ ಕಾಲ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಮಾಡಿ ಕೊಡಲಾಗಿದೆ. ಈ ಬಗ್ಗೆ ಆಹಾರ ಇಲಾಖೆ ಹೆಚ್ಚುವರಿ ನಿರ್ದೇಶಕ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

ಮೊದಲ ವಲಯದಲ್ಲಿ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳ ಎಪಿಎಲ್, ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಅಗಸ್ಟ್ 5ರಿಂದ 7ರವರೆಗೂ ಇಲ್ಲಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ವಿಶೇಷ ಎಂದರೆ ಬೆಳಗ್ಗೆ 10 ಗಂಟೆಯಿAದ ಸಂಜೆ 7 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಇಲ್ಲಿ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಮಾತ್ರ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.

ಕಳೆದ ತಿಂಗಳು ಕೂಡಾ ಆಹಾರ ಇಲಾಖೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿತ್ತು. ಆದರೆ ಸರ್ವರ್ ಡೌನ್ ಆಗಿ ಸಾರ್ವಜನಿಕರಿಗೆ ಈ ಅವಕಾಶವನ್ನು ಬಳಸಿಕೊಳ್ಳುವುದು ಸಾಧ್ಯವಾಗಿರಲಿಲ್ಲ. ತಿದ್ದುಪಡಿ ಮಾಡಿಸಲು ಬಂದ ಸಾರ್ವಜನಿಕರು ಸಮಸ್ಯೆ ಎದುರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮತ್ತೆ ಸರ್ಕಾರ ಈ ಅವಕಾಶ ನೀಡಿದೆ. ಸೇವಾ ಕೇಂದ್ರದಲ್ಲಿ ಮಾತ್ರ ಈ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಇನ್ನು, ರೇಷನ್ ಕಾರ್ಡ್ ತಿದ್ದುಪಡಿಗೆ ಬಯೋಮೆಟ್ರಿಕ್ ಸೌಲಭ್ಯ ಇರುವ ಕಂಪ್ಯೂಟರ್ ಅವಶ್ಯವಾಗಿದ್ದು, ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರದಲ್ಲಿ ತಿದ್ದುಪಡಿ ಮಾಡಿಸಬಹುದಾಗಿದೆ.
ಏನೇನು ತಿದ್ದುಪಡಿ ಮಾಡಬಹುದು?
ಫಲಾನುಭವಿ ಹೆಸರು ಬದಲಾವಣೆ, ಪಡಿತರ ಕೇಂದ್ರ ಬದಲಾವಣೆ
ಕಾರ್ಡ್ ಸದಸ್ಯರ ಹೆಸರು ಡಿಲಿಟ್ & ಸೇರ್ಪಡೆ
ಕಾರ್ಡ್ ಮುಖ್ಯಸ್ಥರ ಹೆಸರು ಬದಲಾವಣೆ
ಮಹಿಳೆಯನ್ನು ಮನೆಯ ಯಜಮಾನಿ ಎಂದು ಎಂದು ಇಲ್ಲಿ ಹೆಸರು ಬದಲಾವಣೆ ಮಾಡಿಕೊಳ್ಳಬಹುದು.